AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆ

ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಹೆಚ್ಚಿನ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕೊಪ್ಪಳ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ,ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಕರ್ನಾಟಕ 19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗಲಿದೆ.

Karnataka Rains: ಕರ್ನಾಟಕದ 19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Aug 06, 2025 | 7:20 AM

Share

ಬೆಂಗಳೂರು, ಆಗಸ್ಟ್​ 06: ಕರ್ನಾಟಕ 19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ಕೇವಲ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಷ್ಟೇ ಅಲ್ಲ ಬೆಂಗಳೂರು ಮತ್ತಿತರೆ ಕಡೆಗಳಲ್ಲೂ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕೊಪ್ಪಳ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ,ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮಧುಗಿರಿ, ನಾಯಕನಹಟ್ಟಿ, ನಾಗಮಂಗಲ, ಬರಗೂರು, ಥೊಂಡೇಬಾವಿ, ರಾಮನಗರ, ಗುಂಡ್ಲುಪೇಟೆ, ಗುಬ್ಬಿ, ಚಿತ್ರದುರ್ಗ, ಪರಶುರಾಂಪುರ, ಮದ್ದೂರು, ಕುಣಿಗಲ್, ಹಿರಿಯೂರು, ಬೆಳ್ಳೂರು, ನಂಜನಗೂಡು, ತಿಪಟೂರು, ಮಂಕಿ, ಕೃಷ್ಣರಾಜಸಾಗರ, ಕಿಬ್ಬನಹಳ್ಳಿ, ಬಂಡೀಪುರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಸುರಿಯಲಿದೆ ಭಾರಿ ಮಳೆ

ಟಿಜಿ ಹಳ್ಳಿ, ಸರಗೂರು, ಮಿಡಿಗೇಶಿ, ಕುಂದಗೋಳ, ಗೌರಿಬಿದನೂರು, ರಾಯಲ್ಪಾಡು, ಕುರ್ಡಿ, ಕೆಆರ್​ ನಗರ, ಕಳಸ, ಕಲಬುರಗಿ, ಹೊಸದುರ್ಗ, ಚಿಂತಾಮಣಿ, ಚಿಕ್ಕಬಳ್ಳಾಪುರ, ಭರಮಸಾಗರ, ಬೇಗೂರು, ಬನವಾಸಿ, ಅಜ್ಜಂಪುರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಎಚ್​​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು