Karnataka Rains: ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದ 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆ

|

Updated on: Oct 21, 2024 | 7:42 AM

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಹಾಗೆಯೇ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು ಮುಂದಿನ ಎರಡು ದಿನಗಳ ಮಳೆ ವಿಪರೀತವಾಗುವ ನಿರೀಕ್ಷೆ ಇದೆ.

Karnataka Rains: ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದ 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ಮಳೆ
Image Credit source: PTI
Follow us on

ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಬೀಳುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿ ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಶಿವಮೊಗ್ಗ, ಮಾಗಡಿ, ಹೊಸಕೋಟೆ, ಎನ್​ಆರ್​ಪುರ, ತರೀಕೆರೆ, ಭದ್ರಾವತಿ, ಔರಾದ್, ಚಿಕ್ಕಬಳ್ಳಾಪುರ, ಬೆಂಗಳೂರು, ಮಂಗಳೂರು, ಕಡೂರು, ಕೋಲಾರ, ಕುಣಿಗಲ್, ಕೊಪ್ಪ, ಎಲೆಕ್ಟ್ರಾನಿಕ್​ಸಿಟಿ, ಶ್ರವಣಬೆಳಗೊಳ, ಕಾರ್ಕಳ, ಕೊಟ್ಟಿಗೆಹಾರ, ಲೋಕಾಪುರ, ಲಿಂಗನಮಕ್ಕಿ, ಅಜ್ಜಂಪುರ, ಹುಣಸೂರು, ಚಿಂತಾಮಣಿಯಲ್ಲಿ ಮಳೆಯಾಗಿದೆ.

ಕೃಷ್ಣರಾಜಪೇಟೆ, ತಾವರಗೇರಾ, ಹುಮನಾಬಾದ್, ಕಮ್ಮರಡಿ, ಸಿದ್ದಾಪುರ, ಉಡುಪಿ, ಕಿರವತ್ತಿ, ತ್ಯಾಗರ್ತಿ, ಹೊನ್ನಾಳಿ, ಹೆಸರಘಟ್ಟ, ನಾಗಮಂಗಲ, ದಾವಣಗೆರೆ, ರಾಮನಗರ, ಪೊನ್ನಂಪೇಟೆ, ಕಳಸ, ಮಾಣಿ, ಶಿರಹಟ್ಟಿ, ಖಜೂರಿಯಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 33.1ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಮಳೆ ಹೆಚ್ಚಾಗಿದ್ದು, ಸೋಮವಾರವೂ ಮಳೆ ಸುರಿಯುತ್ತಲೇ ಇದೆ. ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:
ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದ ಗುಡುಗು ಸಹಿತ ಭಾರಿ ಮಳೆ, ಅ.26ರವರೆಗೂ ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 31.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಚಂಡಮಾರುತ ಪರಿಚಲನೆಯಿಂದಾಗಿ ಕರ್ನಾಟಕ ಆಂಧ್ರ ಪ್ರದೇಶ, ತಮಿಳುನಾಡು, ಒಡಿಶಾದಲ್ಲಿ ಭಾರೀ ಮಳೆ ಆಗಲಿದೆ.
ಸದ್ಯ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇಲ್ಲಿ ಚಂಡಮಾರುತ ಪರಿಚಲನೆಯ ವಾತಾವರಣ ನಿರ್ಮಾಣವಾಗಿದೆ. ಇದು ಮುಂದಿನ 2 ದಿನಗಳಲ್ಲಿ ಮತ್ತುಷ್ಟು ತೀವ್ರಗೊಂಡು ಹಲವು ಅವಾಂತರ ಸೃಷ್ಟಿಸುವ ಸಾಧ್ಯತೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚಿನ ಮಳೆ ಬೀಳಲಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:41 am, Mon, 21 October 24