ಕರ್ನಾಟಕದ ಯಾವೆಲ್ಲ ಹೆದ್ದಾರಿಗಳಲ್ಲಿ ಸಂಚಾರ ಬಂದ್? ಇಲ್ಲಿದೆ ವಿವರ

ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ತಲೆದೋರಿದೆ. ಈ ಮಧ್ಯೆ, ಪ್ರಮುಖ ಘಾಟಿ ರಸ್ತೆಗಳಲ್ಲಿ ಭೂಕುಸಿತದ ಪರಿಣಾಮ ಸಂಚಾರಕ್ಕೆ ಅಡಚಣೆಯಾಗಿದೆ. ಇನ್ನು ಕೆಲವೇ ಪ್ರವಾಹದಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತತಗೊಂಡಿದೆ. ರಾಜ್ಯದ ಯಾವೆಲ್ಲ ಹೆದ್ದಾರಿಗಳಲ್ಲಿ ಸಂಚಾರ ಬಂದ್ ಆಗಿದೆ ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕದ ಯಾವೆಲ್ಲ ಹೆದ್ದಾರಿಗಳಲ್ಲಿ ಸಂಚಾರ ಬಂದ್? ಇಲ್ಲಿದೆ ವಿವರ
ಅಂಕೋಲಾ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭೂಕುಸಿತದ ಡ್ರೋನ್ ಚಿತ್ರ
Follow us
Ganapathi Sharma
|

Updated on: Jul 19, 2024 | 10:06 AM

ಬೆಂಗಳೂರು, ಜುಲೈ 19: ಭಾರಿ ಮಳೆಯ ಕಾರಣ ಕರ್ನಾಟಕದ ಹಲವೆಡೆ ಭೂಕುಸಿತ, ಪ್ರವಾಹ ಪರಿಸ್ಥಿತಿ ತಲೆದೋರಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಪರಿಣಾಮವಾಗಿ ಅನೇಕ ಹೆದ್ದಾರಿಗಳಲ್ಲಿ ಸಂಚಾರ ಭಾಗಶಃ ಸ್ಥಗಿತಗೊಂಡಿದ್ದರೆ, ಇನ್ನು ಕೆಲವು ರಸ್ತೆಗಳಲ್ಲಿ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಅಂಕೋಲಾದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತದ ಕಾರಣ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಇದೇ ರೀತಿಯ ಪರಿಸ್ಥಿತಿ ರಾಜ್ಯದ ಇನ್ನೂ ಹಲವು ರಸ್ತೆಗಳಲ್ಲಿದೆ.

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸದ್ಯಕ್ಕಿಲ್ಲ ಸಂಚಾರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹತ್ತಾರು ಅವಾಂತರಗಳನ್ನು ಸೃಷ್ಟಿ ಮಾಡಿದೆ. ಅದರಲ್ಲೂ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುವ ವಾಹನ ಸವಾರರ ಜೀವ ಹಿಂಡುತ್ತಿದೆ. ಶಿರೂರು ಮತ್ತು ಬರ್ಗಿಯಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಕಳೆದ ನಾಲ್ಕು ದಿನದಿಂದ ಹೆದ್ದಾರಿಯಲ್ಲಿ ಊಟ ನಿದ್ದೆ ಇಲ್ಲದೇ ಲಾರಿ ಚಾಲಕರು ಪರದಾಡುವ ಸ್ಥಿತಿ ನಿರ್ಮಾಣ ವಾಗಿದೆ. ಕಿಲೋಮೀಟರ್​ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ.

ತಮಿಳುನಾಡು, ಕೇರಳಕ್ಕೆ ಸಂಪರ್ಕ ಕಡಿತ

ಕಬಿನಿ ಡ್ಯಾಂನಿಂದ 70 ಸಾವಿರ ಕ್ಯೂಸೆಕ್ ನೀರು ಬಿಟ್ಟ ಕಾರಣ ಮೈಸೂರು ಜಿಲ್ಲೆಯ ನಂಜನಗೂಡು ಬಳಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಸಂಚಾರ ಬಂದ್ ಮಾಡಲಾಗಿದೆ. ಪರಿಣಾಮವಾಗಿ ತಮಿಳುನಾಡು, ಕೇರಳಕ್ಕೆ ಸಂಪರ್ಕ ಭಾಗಶಃ ಕಡಿತಗೊಂಡಿದೆ. ನಂಜನಗೂಡಿನ ಮಲ್ಲನ ಮೂಲೆ ಮಠದ ಬಳಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿ ಬಂದ್

ರಾಗಿಹೊಸಳ್ಳಿ ಬಳಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ ಕಾರಣ ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಸಂಚಾರ ಬಂದ್ ಆಗಿದೆ. ಪರಿಣಾಮವಾಗಿ ಕರಾವಳಿ ಮತ್ತು ಮಲೆನಾಡಿನ ಸಂಪರ್ಕ ಕಷ್ಟವಾಗಿದೆ. ಸದ್ಯ ಕರಾವಳಿ ಭಾಗಕ್ಕೆ ತೆರಳಲು ಮತ್ತು ಅಲ್ಲಿಂದ ಮಲೆನಾಡು ಪ್ರದೇಶಕ್ಕೆ ಪ್ರಯಾಣಿಸಲು ಯಲ್ಲಾಪುರ – ಅಂಕೋಲಾ ರಸ್ತೆ ಅಥವಾ ಶಿರಸಿ – ಯಾಣ – ಕುಮಟಾ ರಸ್ತೆಯನ್ನು ಬಳಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಅತ್ತ ದೇವಿಮನೆ ಘಟ್ಟಡದಲ್ಲಿಯೂ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಪರಿಣಾಮವಾಗಿ ಹಲವೆಡೆ ಭೂಕುಸಿತದ ಆತಂಕ ಎದುರಾಗಿದೆ.

ಬೆಂಗಳೂರು ಮಂಗಳೂರು ಸಂಪರ್ಕ ಭಾಗಶಃ ಕಡಿತ

ಬೆಂಗಳೂರು-ಮಂಗಳೂರು ನಡುವಣ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೂಡ ಸಂಚಾರಕ್ಕೆ ಸಮಸ್ಯೆಯಾಗಿದೆ. ಶಿರಾಡಿ ಘಾಟಿ ದೊಡ್ಡತಪ್ಲು ಎಂಬಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ್ದು, ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ಅತ್ತ ಸಂಪಾಜೆ ಘಾಟಿಯಲ್ಲಿ ಭೂಕುಸಿತದ ಆತಂಕ ಇರುವ ಕಾರಣ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ 3 ದಿನಗಳ ಕಾಲ ಸಂಚಾರ ನಿಷೇಧಿಸಿ ಮಡಿಕೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇನ್ನು ಚಿಕ್ಕಮಗಳೂರಿನ ಕೊಟ್ಟಿಗೆಹಾರ ಮೂಲಕ ಸಾಗುವ ಚಾರ್ಮಾಡಿ ಘಾಟಿಯೊಂದೇ ಸದ್ಯ ಮಂಗಳೂರು ಬೆಂಗಳೂರು ಸಂಪರ್ಕಕ್ಕೆ ಉಳಿದುಕೊಂಡಿದೆ. ರೈಲು ಪ್ರಯಾಣಕ್ಕೆ ಈವರೆಗೆ ಯಾವುದೇ ಸಮಸ್ಯೆ ಆಗಿಲ್ಲ.

ಇದನ್ನೂ ಓದಿ: ಬೆಂಗಳೂರು-ಮಂಗಳೂರು ಎಲ್ಲಾ ಮಾರ್ಗಗಳು ಭಾಗಶಃ ಬಂದ್

ಮಡಿಕೇರಿ-ವಿರಾಜಪೇಟೆ ರಾಜ್ಯ ಹೆದ್ದಾರಿ ಬಂದ್ ಆತಂಕ

ಕೊಡಗಿನಲ್ಲಿ ರಣಭೀಕರ ಮಳೆಯಾಗುತ್ತಿದ್ದು, ಮಡಿಕೇರಿ ತಾಲೂಕಿನ ಮಡಿಕೇರಿ-ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ಪ್ರವಾಹ ಉಂಟಾಗಿದೆ. ಸದ್ಯ ಯಾವುದೇ ಕ್ಷಣ ವಿರಾಜಪೇಟೆ ಸಂಪರ್ಕ‌ ಕಡಿತವಾಗುವ ಸಾಧ್ಯತೆಯಿದೆ.

ಶೃಂಗೇರಿ ಹೊರನಾಡು ರಸ್ತೆ ಬಂದ್

ಶೃಂಗೇರಿ ಮತ್ತು ಹೊರನಾಡು ಮಧ್ಯೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿಯೂ ಸಂಚಾರ ಸ್ಥಗಿತಗೊಂಡಿವೆ. ಕಳಸ ಪಟ್ಟಣ ಸಂಪರ್ಕಿಸುವ ರಸ್ತೆ, ಕೊಪ್ಪ ತಾಲೂಕಿನ ಬಿಳಾಲುಕೊಪ್ಪದಿಂದ ಬಸರೀಕಟ್ಟೆಗೆ ಹೋಗುವ ರಸ್ತೆ ಜಲಾವೃತಗೊಂಡಿದ್ದು, ಶೃಂಗೇರಿಯಿಂದ ಹೊರನಾಡಿಗೆ ಹೋಗುವ ಮುಖ್ಯ ರಸ್ತೆಯೇ ಬಂದ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ