Karnataka Rain: ದುರ್ಬಲಗೊಂಡ ಅಸಾನಿ ಚಂಡಮಾರುತ; ಬೆಂಗಳೂರು, ಕರಾವಳಿಯಲ್ಲಿ 4 ದಿನ ಮಳೆ ಸಾಧ್ಯತೆ
Cyclone Asani: ಈಗಾಗಲೇ ಅಸಾನಿ ಚಂಡಮಾರುತ ದುರ್ಬಲಗೊಂಡಿದ್ದರೂ ಇಂದಿನಿಂದ 4 ದಿನ ಬೆಂಗಳೂರಿನಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ಕರ್ನಾಟಕದಲ್ಲಿ ಅಸಾನಿ ಚಂಡಮಾರುತದ (Cyclone Asani) ಪರಿಣಾಮವಾಗಿ ಮಳೆ ಮುಂದುವರೆದಿದೆ. ಕರಾವಳಿ ತೀರದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಕೂಡ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಈಗಾಗಲೇ ಅಸಾನಿ ಚಂಡಮಾರುತ ದುರ್ಬಲಗೊಂಡಿದ್ದರೂ ಇಂದಿನಿಂದ 4 ದಿನ ಬೆಂಗಳೂರು (Bengaluru Rain) ಸೇರಿದಂತೆ ಹಲವೆಡೆ ಮಳೆ ಮುಂದುವರೆಯುವ ನಿರೀಕ್ಷೆಯಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಿಸಿಲು ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಇಂದು ಮಳೆಯಾಗುವ ನಿರೀಕ್ಷೆಯಿದೆ ಎಂದು ಟಿವಿ9ಗೆ ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ನಾನಾ ಭಾಗಗಳಲ್ಲಿ ಈಗಾಗಲೇ ಮಳೆ ಅಬ್ಬರ ಶುರುವಾಗಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ನೈಸರ್ಗಿಕ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಗಳಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ನೈಸರ್ಗಿಕ ವಿಕೋಪ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದ್ದು, ಸುಮಾರು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 15 ರಿಂದ 65 ಮಿ.ಮೀ ಮಳೆಯ ಬಗ್ಗೆ ಮುನ್ಸೂಚನೆ ನೀಡಲಾಗಿದೆ.
#Bengaluru city #IMD observatory recorded a max of 24.3c making it the coolest May day in at least 22 years!!! This is also a whopping 9c below normal! The observatory also recorded a rainfall of 3.5 mm till 5:30 pm. #bengalururains #BengaluruWeather #CycloneAsani #Karnataka
— Bengaluru Weather (@BngWeather) May 10, 2022
ಭಾನುವಾರ ಮಧ್ಯಾಹ್ನದಿಂದಲೇ ಚಂಡಮಾರುತ ಪರಿಣಾಮ ನೆರೆಯ ಆಂಧ್ರಪ್ರದೇಶ, ತಮಿಳುನಾಡು ಮತ್ತು ಒಡಿಶಾ ರಾಜ್ಯಗಳಲ್ಲಿ ತೀವ್ರ ಮಳೆಯಾಗುತ್ತಿದೆ. ಕರ್ನಾಟಕದ ಬೆಂಗಳೂರು, ಮಲೆನಾಡು, ಕರಾವಳಿ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಕರಾವಳಿ ಮತ್ತು ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಕೆಲವೆಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಕಳೆದ 22 ವರ್ಷಗಳಲ್ಲಿ ಮೇ ತಿಂಗಳಲ್ಲಿ ಮೊದಲ ಬಾರಿಗೆ ಅತ್ಯಂತ ಚಳಿಯ ವಾತಾವರಣ ದಾಖಲಾಗಿದೆ. ನಿನ್ನೆ ಅಸಾನಿ ಚಂಡಮಾರುತದ ಪ್ರಭಾವದಿಂದ ಬೆಂಗಳೂರಿನಲ್ಲಿ 2000ರಿಂದ ಮೇ ತಿಂಗಳಲ್ಲಿ ಇಂದು ಅತ್ಯಂತ ಚಳಿಯ ದಿನ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು 3.5 ಮಿಮೀ ಮಳೆ, ಬಲವಾದ ಗಾಳಿ ಮತ್ತು ಮೋಡ ಕವಿದ ಆಕಾಶವಿತ್ತು. ಇಲ್ಲಿನ ಕನಿಷ್ಠ ತಾಪಮಾನವು 21.9 ಡಿಗ್ರಿ ಸೆಲ್ಸಿಯಸ್‌ನಿಂದ 20.2 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಕಲಬುರ್ಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ ಉಷ್ಣಾಂಶ 42.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
Isolated heavy falls very likely over Assam-Meghalaya on 10th; over Arunachal Pradesh during 13th-14th & and over Nagaland-Manipur-Mizoram-Tripura during 10th-14th May.
Isolated heavy to very heavy rainfall also likely over Assam-Meghalaya during 11th-13th May, 2022.
— India Meteorological Department (@Indiametdept) May 10, 2022
ಕರ್ನಾಟಕದ ಮಾತ್ರವಲ್ಲದೆ ಅಸ್ಸಾಂ ಮತ್ತು ಮೇಘಾಲಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾದ ಕರಾವಳಿ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾದಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಜಾರ್ಖಂಡ್, ಬಿಹಾರ, ಆಂಧ್ರಪ್ರದೇಶ, ಕರ್ನಾಟಕದ ಕರಾವಳಿ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಹಾಗೇ, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಹಿಮಪಾತದ ಜೊತೆಗೆ ಮಳೆಯಾಗುವ ಸಾಧ್ಯತೆಯಿದೆ. ಗೋವಾ, ವಿದರ್ಭ, ಪೂರ್ವ ಉತ್ತರ ಪ್ರದೇಶ, ಛತ್ತೀಸ್‌ಗಢ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ ಒಳಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಪಶ್ಚಿಮ ರಾಜಸ್ಥಾನದಲ್ಲಿ ತೀವ್ರ ಶಾಖದ ಪರಿಸ್ಥಿತಿಗಳು ಸಾಧ್ಯತೆಯಿದೆ. ಗುಜರಾತ್, ವಿದರ್ಭ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ದಕ್ಷಿಣ ಹರಿಯಾಣ, ದಕ್ಷಿಣ ಪಂಜಾಬ್ ಮತ್ತು ದೆಹಲಿಯಲ್ಲಿ ಬಿಸಿಗಾಳಿಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯಿದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ