ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಮಂಗಳೂರು ಎಲ್ಲಾ ಮಾರ್ಗಗಳು ಭಾಗಶಃ ಬಂದ್

ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆರಾಯ ಅಬ್ಬರಿಸುತ್ತಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಗುಡ್ಡ ಕುಸಿಯುವ ಭೀತಿ ಹಿನ್ನಲೆ ಇದೀಗ ಬೆಂಗಳೂರು ಟು ಮಂಗಳೂರು ಎಲ್ಲಾ ಮಾರ್ಗಗಳು ಭಾಗಶಃ ಬಂದ್ ಆಗಿವೆ. ಹಾಗಾಗಿ ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ. ಶಿರಾಡಿಘಾಟ್​​ನಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ. 

ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಮಂಗಳೂರು ಎಲ್ಲಾ ಮಾರ್ಗಗಳು ಭಾಗಶಃ ಬಂದ್
ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಮಂಗಳೂರು ಎಲ್ಲಾ ಮಾರ್ಗಗಳು ಭಾಗಶಃ ಬಂದ್
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jul 18, 2024 | 10:14 PM

ಬೆಂಗಳೂರು, ಜುಲೈ 18: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂಗಾರು ಮಳೆ (Rain) ಧಾರಾಕಾರ ಸುರಿಯುತ್ತಿದೆ. ಇದರಿಂದ ಮಳೆ ಆರ್ಭಟಕ್ಕೆ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಅದರಂತೆ ಬೆಂಗಳೂರು ಟು ಮಂಗಳೂರು (Bengaluru-Mangaluru) ಅಥವಾ ಮಂಗಳೂರು ಟು ಬೆಂಗಳೂರು ಮಾರ್ಗ ರಸ್ತೆಗಳು ಸಹ ಬಂದ್​ ಆಗಿವೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳಬೇಕಾದರೆ ಚಾರ್ಮಾಡಿ ಘಾಟ್, ಶಿರಾಡಿಘಾಟ್ ಮತ್ತು ಮಡಿಕೇರಿಯ ಸಂಪಾಜೆ ಘಾಟ್​ ಮೂಲಕ ಹೋಗಬೇಕು. ಆದರೆ, ಇದೀಗ ಈ ಮಾರ್ಗಗಳಲ್ಲಿ ಗುಡ್ಡ ಕುಸಿಯುವ ಭೀತಿ ಇರುವುದರಿಂದ ಈ ಮಾರ್ಗಗಳನ್ನು ಬಂದ್ ಮಾಡಲಾಗಿದೆ.

ಭೂ ಕುಸಿತದ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಬೆಂಗಳೂರು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಶಿರಾಡಿಘಾಟ್​​ನಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಟು ಮಂಗಳೂರು ಮೂರು ಮಾರ್ಗಗಳು ಬಂದ್

ಬೆಂಗಳೂರು ಟು ಮಂಗಳೂರಿಗೆ ಅಥವಾ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಮೂರು ಮಾರ್ಗಗಳಿವೆ. ಒಂದು ಚಾರ್ಮಾಡಿ ಘಾಟ್ ಮೂಲಕ, ಇನ್ನೊಂದು ಶಿರಾಡಿಘಾಟ್​, ಮತ್ತೊಂದು ಮಡಿಕೇರಿ- ಸಂಪಾಜೆ ಘಾಟ್​​ ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ ಹೋಗಬಹುದು. ಆದ್ರೆ, ಇದೀಗ ಈ ಎಲ್ಲಾ ರಸ್ತೆ ಮಾರ್ಗಗಳು ಬಂದ್ ಆಗಿವೆ. ಅಲ್ಲಲ್ಲಿ ರಸ್ತೆ ಕುಸಿಯುವ ಭೀತಿ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಎಲ್ಲಾ ಮಾರ್ಗಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ: ಶೃಂಗೇರಿ-ಹೊರನಾಡು ಸೇರಿದಂತೆ ಪ್ರವಾಸ ತಾಣಗಳ ರಸ್ತೆ ಸಂಚಾರ ಬಂದ್

ಇನ್ನು ಚಾರ್ಮಾಡಿ ಘಾಟ್​ ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ ಹೋಗಬಹುದು. ಆದ್ರೆ, ಈ ಘಾಟ್​ನಲ್ಲಿ ಭಾರೀ ವಾಹನ ಸಂಚರಿಸುವಂತಿಲ್ಲ. ಇನ್ನು ಕಾರು, ಕೆಎಸ್​ಆರ್​ಟಿಸಿ ಬಸ್​ಗಳು ಹೋಗಬಹುದು. ಆದ್ರೆ, ದೋ ಅಂತ ಮಳೆ ಸುರಿಯುತ್ತಿದ್ದರಿಂದ ಈ ರಸ್ತೆಯಲ್ಲಿ ರಾತ್ರಿ ಪ್ರಯಾಣ ಅಷ್ಟು ಸೂಕ್ತವಾಗಿಲ್ಲ. ಮೊದಲೇ ದೊಡ್ಡ ಘಾಟ್​ ಆಗಿರುವುದರಿಂದ ರಸ್ತೆ ಕಿರಿದಾಗಿದೆ, ಇನ್ನೊಂದೆಡೆ ಮಳೆಯಾಗುತ್ತಿದೆ. ಹೀಗಾಗಿ ಅಲ್ಲಲ್ಲಿ ರಸ್ತೆಗೆ ಅಡ್ಡಲಾಗಿ ಗಿಡ-ಮರಗಳು ಬೀಳುತ್ತಿವೆ. ಈ ಹಿನ್ನೆಲೆಯಲ್ಲಿ ಸದ್ಯ ಈ ಮಾರ್ಗದಲ್ಲಿ ಪ್ರಯಾಣ ಮಾಡುವುದು ಅಷ್ಟು ಸಮಂಜಸವಲ್ಲ.

ಇದನ್ನೂ ಓದಿ: ಕುಮಟಾ ಬಳಿ ಗುಡ್ಡಕುಸಿತದ ದೃಶ್ಯ ಮೊಬೈಲ್ ಫೋನ್ ಕೆಮೆರಾದಲ್ಲಿ ಸೆರೆ, ಅನಾಹುತಗಳಿಗೆ ಕೊನೆ ಯಾವಾಗ?

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ಮಡಿಕೇರಿ ನಗರದ ಜ. ತಿಮ್ಮಯ್ಯ ವೃತ್ತದಲ್ಲೇ ಸಂಚಾರಕ್ಕೆ ಪೊಲೀಸರು ತಡೆ ನೀಡಿದ್ದಾರೆ. ಹಾಗಾಗಿ ಮಡಿಕೇರಿಯಿಂದ‌ ಮಂಗಳೂರಿಗೆ ತೆರಳುವವರು ತೀವ್ರ ಪರದಾಡುವಂತಾಗಿದೆ. ಕೇವಲ‌ ಎರಡು ಗಂಟೆ ಮೊದಲು ಹೆದ್ದಾರಿ ಬಂದ್​ಗೆ ಆದೇಶ ನೀಡಲಾಗಿದ್ದು, ಆದೇಶದ ಬಗ್ಗೆ ಗೊತ್ತಿಲ್ಲದೆ ಪ್ರಯಾಣಿಕರು ಆಗಮಿಸುತ್ತಿದ್ದಾರೆ.

ಮಡಿಕೇರಿ-ಸಂಪಾಜೆವರೆಗಿನ 275 ಹೆದ್ದಾರಿ ನಾಲ್ಕು ದಿನ ಬಂದ್

ರಾಷ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವೆ ತೀವ್ರ ಮಳೆಯಿಂದಾಗಿ ರಸ್ತೆ ಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತಾಸಕ್ತಿಯಿಂದ ಈ ಭಾಗದಲ್ಲಿ ಜುಲೈ 18ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ರಿಂದ ಮರದಿನ ಬೆಳಿಗ್ಗೆ 6 ಗಂಟೆ ವರೆಗೆ ಎಲ್ಲಾ ವಾಹನಗ ಸಂಚಾರ ನಿರ್ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:54 pm, Thu, 18 July 24

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ