Karnataka Rain: ಕರ್ನಾಟಕದಲ್ಲಿ ಕೊಂಚ ತಗ್ಗಿದ ವರುಣನ ಅಬ್ಬರ; ಇನ್ನೆರಡು ದಿನ ಸಾಧಾರಣ ಮಳೆ ಸಾಧ್ಯತೆ

Weather Today: ಇಂದಿನಿಂದ ನವೆಂಬರ್ 9ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಶುಷ್ಕ ವಾತಾವರಣ ಉಂಟಾಗಿದೆ. ಇದರ ನಡುವೆ ತುಂತುರು ಮಳೆಯೂ ಸುರಿಯುತ್ತಿದೆ.

Karnataka Rain: ಕರ್ನಾಟಕದಲ್ಲಿ ಕೊಂಚ ತಗ್ಗಿದ ವರುಣನ ಅಬ್ಬರ; ಇನ್ನೆರಡು ದಿನ ಸಾಧಾರಣ ಮಳೆ ಸಾಧ್ಯತೆ
ಕರ್ನಾಟಕದಲ್ಲಿ ಮಳೆ
Follow us
| Updated By: ಸುಷ್ಮಾ ಚಕ್ರೆ

Updated on: Nov 08, 2022 | 6:23 AM

Bengaluru Rain: ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿ ಶುಷ್ಕ ವಾತಾವರಣ ಹೆಚ್ಚಾಗಿದೆ. ಆದರೂ ಇನ್ನೆರಡು ದಿನ ಕರ್ನಾಟಕದ (Karnataka Rain) ಬೆಂಗಳೂರು, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಇಂದಿನಿಂದ ನವೆಂಬರ್ 9ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಶುಷ್ಕ ವಾತಾವರಣ ಉಂಟಾಗಿದೆ. ಇದರ ನಡುವೆ ತುಂತುರು ಮಳೆಯೂ ಸುರಿಯುತ್ತಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಮಳೆ ಮುಂದುವರೆಯಲಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಮಳೆಯ ಅಬ್ಬರ; ಕರಾವಳಿ, ಮಲೆನಾಡಿಗೆ ಹಳದಿ ಅಲರ್ಟ್​ ಘೋಷಣೆ

ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನ. 9ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಇಂದು ಮತ್ತು ನಾಳೆ (ನ. 9) ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಭಾಗದಲ್ಲಿ ಕೂಡ ಇಂದು ಮಳೆಯಾಗಲಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸುತ್ತಮುತ್ತ ಮಂಜು ಕವಿಯುವ ಸಾಧ್ಯತೆಯಿದೆ. ಧಾರವಾಡ, ಬೆಳಗಾವಿ, ಹಾವೇರಿ, ರಾಯಚೂರಿನಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಕರ್ನಾಟಕದ ಉಳಿದೆಡೆ ಒಣ ಹವೆ ಮುಂದುವರೆಯಲಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಆಂಧ್ರಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಗುಜರಾತ್, ಹರಿಯಾಣ, ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ, ಮಧ್ಯ ಮತ್ತು ಪೂರ್ವ ಭಾರತದಲ್ಲಿ ಗಾಳಿಯ ಗುಣಮಟ್ಟವು ತುಂಬಾ ಕಳಪೆಯಾಗಲಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ ಮತ್ತು ಕೇರಳ ಮತ್ತು ಮಾಹೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯು ಮುಂದುವರಿಯುವ ಸಾಧ್ಯತೆಯಿದೆ. ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಸಾಕಷ್ಟು ವ್ಯಾಪಕವಾದ ಮಳೆ ಬೀಳುವ ಸಾಧ್ಯತೆಯಿದೆ. ನವೆಂಬರ್ 11ರಂದು ತಮಿಳುನಾಡು-ಪುದುಚೇರಿ-ಕಾರೈಕಲ್‌ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ನವೆಂಬರ್ 8ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: Rain Updates: ಈ ರಾಜ್ಯಗಳಲ್ಲಿ ಇನ್ನೂ ಕೆಲವು ದಿನ ಭಾರೀ ಮಳೆ ಸಾಧ್ಯತೆ; ಕೇರಳ, ತಮಿಳುನಾಡಿಗೆ ಹಳದಿ ಅಲರ್ಟ್

ಉತ್ತರ ಪಂಜಾಬ್ ಮತ್ತು ಉತ್ತರ ಹರಿಯಾಣದಲ್ಲಿ ನವೆಂಬರ್ 9-10 ಮತ್ತು ಉತ್ತರ ರಾಜಸ್ಥಾನದಲ್ಲಿ ನವೆಂಬರ್ 8ರಂದು ಲಘು ಮಳೆ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 11 ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂದು ಮತ್ತು ನವೆಂಬರ್ 9ರಿಂದ 10ರವರೆಗೆ ಸಾಧಾರಣ ಮಳೆ ಅಥವಾ ಹಿಮಪಾತ ಸಂಭವಿಸುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು