Bengaluru Rain: ಅನಿರೀಕ್ಷಿತ ಮಳೆಯಿಂದ ತಂಪಾಯ್ತು ಬೆಂಗಳೂರು; ನಾಳೆಯೂ ತುಂತುರು ಮಳೆ ಸಾಧ್ಯತೆ

Karnataka Weather | ಬೆಂಗಳೂರಿನ ಹಲವು ಭಾಗಗಳಲ್ಲಿ ಇಂದು ಮತ್ತೆ ಮಳೆಯಾಗಿದೆ. ನಾಳೆ (ಶುಕ್ರವಾರ) ಇಡೀ ದಿನ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿರಲಿದೆ.

Bengaluru Rain: ಅನಿರೀಕ್ಷಿತ ಮಳೆಯಿಂದ ತಂಪಾಯ್ತು ಬೆಂಗಳೂರು; ನಾಳೆಯೂ ತುಂತುರು ಮಳೆ ಸಾಧ್ಯತೆ
ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 12, 2021 | 4:40 PM

ಬೆಂಗಳೂರು: ಐದಾರು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯ ದರ್ಶನವಾಗಿರಲಿಲ್ಲ. ಕಳೆದ 2-3 ದಿನಗಳಿಂದ ಬೆಂಗಳೂರಿನಲ್ಲಿ (Bengaluru Weather Today) ಬಿಸಿಲು ಕಾಣಿಸಿಕೊಂಡಿತ್ತು. ಆದರೆ, ಇಂದು ಮಧ್ಯಾಹ್ನದಿಂದ ಇದ್ದಕ್ಕಿದ್ದಂತೆ ಮಳೆ ಸುರಿಯಲಾರಂಭಿಸಿದೆ. ಬನಶಂಕರಿ, ಬಸವನಗುಡಿ, ಹನುಮಂತನಗರ, ಗಿರಿನಗರ, ಜಯನಗರ, ಚಾಮರಾಜಪೇಟೆ, ಶಾಂತಿನಗರ ಭಾಗದಲ್ಲಿ ಇಂದು ಮಳೆ ಸುರಿದಿದೆ. ನಾಳೆ ಕೂಡ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯ ವೇಳೆಗೆ ಮಳೆಯಾಗುವ (Bangalore Rain) ಸಾಧ್ಯತೆಯಿದೆ.

ಬೆಂಗಳೂರಿನ ಹಲವು ಭಾಗಗಳಲ್ಲಿ ಇಂದು ಮತ್ತೆ ಮಳೆಯಾಗಿದೆ. ನಾಳೆ (ಶುಕ್ರವಾರ) ಇಡೀ ದಿನ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ 4 ಗಂಟೆಯ ಬಳಿಕ ತುಂತುರು ಮಳೆಯಾಗುವ ಸಾಧ್ಯತೆಯದೆ. ಈಗಾಗಲೇ ಬೆಂಗಳೂರಿನಲ್ಲಿ 209 ಸೂಕ್ಷ್ಮ ವಲಯಗಳನ್ನು ಗುರುತಿಸಲಾಗಿದ್ದು, ಮಳೆ ಬಂದರೆ ಈ ಭಾಗಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುವುದರಿಂದ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಈಗಾಗಲೇ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಇಂದು ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಕಲ್ಯಾಣ ಕರ್ನಾಟಕದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಆ. 13ರವರೆಗೂ ಮಳೆ ಮುಂದುವರೆಯಲಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಆಗಸ್ಟ್​ 15ರವರೆಗೂ ವರುಣನ ಆರ್ಭಟ; ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆ

Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರಿನ ಪ್ರಮಾಣ; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Rain Bangalore Rains Continues till Sunday Weather Today Monsoon Rain in Bengaluru)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ