ಬೆಂಗಳೂರು: ಐದಾರು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯ ದರ್ಶನವಾಗಿರಲಿಲ್ಲ. ಕಳೆದ 2-3 ದಿನಗಳಿಂದ ಬೆಂಗಳೂರಿನಲ್ಲಿ (Bengaluru Weather Today) ಬಿಸಿಲು ಕಾಣಿಸಿಕೊಂಡಿತ್ತು. ಆದರೆ, ಇಂದು ಮಧ್ಯಾಹ್ನದಿಂದ ಇದ್ದಕ್ಕಿದ್ದಂತೆ ಮಳೆ ಸುರಿಯಲಾರಂಭಿಸಿದೆ. ಬನಶಂಕರಿ, ಬಸವನಗುಡಿ, ಹನುಮಂತನಗರ, ಗಿರಿನಗರ, ಜಯನಗರ, ಚಾಮರಾಜಪೇಟೆ, ಶಾಂತಿನಗರ ಭಾಗದಲ್ಲಿ ಇಂದು ಮಳೆ ಸುರಿದಿದೆ. ನಾಳೆ ಕೂಡ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯ ವೇಳೆಗೆ ಮಳೆಯಾಗುವ (Bangalore Rain) ಸಾಧ್ಯತೆಯಿದೆ.
ಬೆಂಗಳೂರಿನ ಹಲವು ಭಾಗಗಳಲ್ಲಿ ಇಂದು ಮತ್ತೆ ಮಳೆಯಾಗಿದೆ. ನಾಳೆ (ಶುಕ್ರವಾರ) ಇಡೀ ದಿನ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ 4 ಗಂಟೆಯ ಬಳಿಕ ತುಂತುರು ಮಳೆಯಾಗುವ ಸಾಧ್ಯತೆಯದೆ. ಈಗಾಗಲೇ ಬೆಂಗಳೂರಿನಲ್ಲಿ 209 ಸೂಕ್ಷ್ಮ ವಲಯಗಳನ್ನು ಗುರುತಿಸಲಾಗಿದ್ದು, ಮಳೆ ಬಂದರೆ ಈ ಭಾಗಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುವುದರಿಂದ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
12.8.2021:Local Forecast for Bengaluru city:
Next 24 hours: Generally cloudy sky. Rain very likely. Surface winds very likely to be strong and gusty at times. Maximum and Minimum temperatures very likely to be around 28 and 21 degree Celsius respectively #imdbangalore— Met centre Bengaluru (@metcentre_bng) August 12, 2021
ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಈಗಾಗಲೇ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಇಂದು ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಕಲ್ಯಾಣ ಕರ್ನಾಟಕದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಆ. 13ರವರೆಗೂ ಮಳೆ ಮುಂದುವರೆಯಲಿದೆ.
ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಆಗಸ್ಟ್ 15ರವರೆಗೂ ವರುಣನ ಆರ್ಭಟ; ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆ
(Karnataka Rain Bangalore Rains Continues till Sunday Weather Today Monsoon Rain in Bengaluru)