Karnataka Rain: ಜುಲೈ 1ರವರೆಗೆ ಬೆಂಗಳೂರು, ಮಲೆನಾಡಿನಲ್ಲಿ ಭಾರೀ ಮಳೆ; ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ
Karnataka Weather Today: ಜೂನ್ 30 ಮತ್ತು ಜುಲೈ 1ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ.
Bangalore Rains: ಕರ್ನಾಟಕದಲ್ಲಿ ಮಳೆ (Rain in Karnataka) ಹೆಚ್ಚಾಗಿದ್ದು, ಜುಲೈ 1ರವರೆಗೂ ವರುಣನ ಆರ್ಭಟ ಮುಂದುವರೆದಿದೆ. ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಸಂಜೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಮಲೆನಾಡಿನಲ್ಲೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೂಡ ಇಂದು ಭಾರೀ ಮಳೆಯಾಗುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಬೆಳಗಾವಿ, ಹಾವೇರಿ, ಧಾರವಾಡ ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ ಮತ್ತು ಪಶ್ಚಿಮ ಘಟ್ಟದ ಪ್ರದೇಶಗಳಲ್ಲಿ ಕಳೆದ 5 ದಿನಗಳಿಂದ ಮಳೆಯಾಗುತ್ತಿದೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 30ರ ಗುರುವಾರದವರೆಗೆ ಕರ್ನಾಟಕದಾದ್ಯಂತ ಭಾರೀ ಮಳೆಯಾಗಲಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ ಭಾಗದಲ್ಲಿ ಜೂನ್ 30 ರಿಂದ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ. ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆ ಹೆಚ್ಚಾಗಲಿದೆ. ಜೂನ್‌ನಲ್ಲಿ, ಕರ್ನಾಟಕದ ಹಲವು ಭಾಗಗಳಲ್ಲಿ ಸುಮಾರು ಒಂದು ವಾರದವರೆಗೆ ಭಾರೀ ಮಳೆ ಸುರಿದಿತ್ತು. ಬೆಂಗಳೂರಿನಲ್ಲಿ 3 ಜನರು ಮಳೆ ಸಂಬಂಧಿತ ಸಮಸ್ಯೆಗಳಿಂದ ಪ್ರಾಣ ಕಳೆದುಕೊಂಡರು.
Rainfall Forecast: (1/2) Widespread moderate to heavy rains with isolated very heavy rains likely over Coastal districts and scattered to widespread very light to moderate rains with isolated heavy rains likely over Malnad districts pic.twitter.com/2tsPPQ52mr
— KSNDMC (@KarnatakaSNDMC) June 28, 2022
ಜೂನ್ 30 ಮತ್ತು ಜುಲೈ 1ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: Karnataka Rain: ಮಲೆನಾಡು, ಕರಾವಳಿಯಲ್ಲಿ ಮಳೆಯಿಂದ ಜೂ. 30ರವರೆಗೆ ಆರೆಂಜ್ ಅಲರ್ಟ್ ಘೋಷಣೆ
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಗೋವಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ, ಕರಾವಳಿ ಕರ್ನಾಟಕ, ಕೇರಳ, ಮಾಹೆ, ಲಕ್ಷದ್ವೀಪ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಸಿಕ್ಕಿಂ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರ, ಕರಾವಳಿ ಆಂಧ್ರಪ್ರದೇಶ, ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾ, ಹರಿಯಾಣ, ಚಂಡೀಗಢ, ದೆಹಲಿ, ಪೂರ್ವ ರಾಜಸ್ಥಾನ ಮತ್ತು ವಿದರ್ಭದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಗುಜರಾತ್, ಮರಾಠವಾಡ, ರಾಯಲಸೀಮಾ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಮಿಂಚು ಸಹಿತ ಚದುರಿದ ಮಳೆ ನಿರೀಕ್ಷಿಸಲಾಗಿದೆ. ಪಂಜಾಬ್ ಮತ್ತು ಹಿಮಾಚಲ ಪ್ರದೇಶದಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ಇದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಮಳೆಯಾಗುವ ಸಾಧ್ಯತೆಯಿದೆ.