Bangalore Rains: 2 ದಿನಗಳಿಂದ ಸಂಜೆಯ ವೇಳೆಗೆ ಸುರಿಯುತ್ತಿರುವ ಭಾರೀ ಮಳೆಯಿಂದ ಬೆಂಗಳೂರಿನ (Bengaluru Rain) ಜನರು ತತ್ತರಿಸಿಹೋಗಿದ್ದಾರೆ. ಇನ್ನೂ 4 ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 4 ದಿನ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಅ. 18ರಂದು ಕರಾವಳಿಗೆ ಕೂಡ ಹಳದಿ ಅಲರ್ಟ್ (Yellow Alert) ನೀಡಲಾಗಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗಲಿದೆ.
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆ ಇರಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಸಂಜೆಯ ಬಳಿ ಮಳೆಯ ಅಬ್ಬರ ಹೆಚ್ಚುತ್ತಿರುವುದರಿಂದ ರಾಜಕಾಲುವೆ, ತಗ್ಗು ಪ್ರದೇಶ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.
ಇದನ್ನೂ ಓದಿ: Bangalore Rain: ಬೆಂಗಳೂರಿನ ಅಲ್ಲಲ್ಲಿ ಮಳೆ, ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವಿಡಿಯೋ ಹಂಚಿಕೊಂಡ ನಗರವಾಸಿಗಳು
ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆ.ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಂದು ತುಮಕೂರು, ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ‘ಹಳದಿ’ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಇನ್ನೂ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿನಲ್ಲೂ ಆಭರೀ ಮಳೆಯಾಗಲಿದ್ದು, ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ತೆಲಂಗಾಣ, ಗೋವಾ, ಕೇರಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ, ಛತ್ತೀಸ್ಗಢ, ಒಡಿಶಾ, ಮಹಾರಾಷ್ಟ್ರ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಉತ್ತರಾಖಂಡ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಮಧ್ಯಪ್ರದೇಶದಲ್ಲಿ ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.