Karnataka Rain: ನಿಲ್ಲದ ಮಳೆಯ ಅಬ್ಬರ; ಕರ್ನಾಟಕದ 10 ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ

| Updated By: ಸುಷ್ಮಾ ಚಕ್ರೆ

Updated on: Sep 09, 2022 | 6:26 AM

Karnataka Weather Today: ಕರ್ನಾಟಕದ 10 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಅಬ್ಬರದ ಮಳೆ ಸುರಿಯಲಿದೆ. ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಇಂದಿನಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

Karnataka Rain: ನಿಲ್ಲದ ಮಳೆಯ ಅಬ್ಬರ; ಕರ್ನಾಟಕದ 10 ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರಿನಲ್ಲಿ ಮಳೆ
Follow us on

Bangalore Rains: ಕರ್ನಾಟಕದ ಕರಾವಳಿ (Coastal Karnataka) ಮತ್ತು ದಕ್ಷಿಣ ಒಳನಾಡಿನ ಎಲ್ಲ ಭಾಗದಲ್ಲೂ ಇಂದಿನಿಂದ 3 ದಿನ (ಸೆ.11) ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಇಂದು (ಸೆ.8) ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮಲೆನಾಡು ಭಾಗದಲ್ಲಿ, ಕೊಡಗು (Kodagu Rain), ಹಾಸನ, ಚಿಕ್ಕಮಗಳೂರು (Chikmagalur Rain) ಮತ್ತು ಶಿವಮೊಗ್ಗ (Shivamogga Rain) ಜಿಲ್ಲೆಯಲ್ಲಿ ಕೂಡ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಿಗೆ ಕೂಡ ಇಂದು ‘ಆರೆಂಜ್ ಅಲರ್ಟ್’ ನೀಡಲಾಗಿದೆ.

ಕರ್ನಾಟಕದ 10 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಅಬ್ಬರದ ಮಳೆ ಸುರಿಯಲಿದೆ. ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಇಂದಿನಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದಿನಿಂದ ಸೆ. 11ರವರೆಗೆ ‘ಹಳದಿ ಅಲರ್ಟ್’ ನೀಡಲಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಇಂದಿನಿಂದ ಸೆ. 11ರವರೆಗೆ ಭಾರೀ ಮಳೆ; ಕರಾವಳಿಗೆ ರೆಡ್ ಅಲರ್ಟ್​ ಘೋಷಣೆ

ಬೆಂಗಳೂರು ನಗರದ ಉತ್ತರ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಿದ್ದರೆ, ದಕ್ಷಿಣ ಭಾಗದಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಸಾಧಾರಣ ಮಳೆಯಾಗುತ್ತಿದೆ. ಈ ಮಳೆಯ ಆರ್ಭಟ ಇಂದಿನಿಂದ 3 ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಗೋವಾ, ಕೇರಳ, ಲಕ್ಷದ್ವೀಪದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಒಡಿಶಾ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಬಿಹಾರ, ಜಾರ್ಖಂಡ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉತ್ತರಾಖಂಡ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಮಧ್ಯಪ್ರದೇಶ ಮತ್ತು ತಮಿಳುನಾಡಿನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಮಳೆಯ ಮುನ್ಸೂಚನೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ