Karnataka Rain: ಮಲೆನಾಡಿನಲ್ಲಿ ಮಳೆಯ ಅಬ್ಬರ ಇಳಿಕೆ; ಕರಾವಳಿಯಲ್ಲಿ ಇನ್ನೆರಡು ದಿನ ಭಾರೀ ಮಳೆ
Karnataka Weather Today: ಉತ್ತರ ಕರ್ನಾಟಕದಲ್ಲಿ ಇಂದಿನಿಂದ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆಯಾಗುತ್ತಿದ್ದು, ಇಂದು ಮತ್ತು ಭಾನುವಾರ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
Bangalore Rains: ಬೆಂಗಳೂರಿನಲ್ಲಿ ಇನ್ನೂ ಮಳೆಯ ಆರ್ಭಟ (Heavy Rainfall) ಕಡಿಮೆಯಾಗಿಲ್ಲ. ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಆದರೂ ಇಂದಿನಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ.
ಬೆಂಗಳೂರಿನಲ್ಲಿ ಭಾರೀ ಮಳೆಗೆ 3 ಸಾವಿರಕ್ಕೂ ಹೆಚ್ಚು ಮನೆಗಳೊಳಗೆ ನೀರು ನುಗ್ಗಿದೆ. ಇಂದು ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ತಿಳಿಸಿದೆ. ಉತ್ತರ ಕರ್ನಾಟಕದಲ್ಲಿ ಇಂದಿನಿಂದ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ. ಇಂದು ಕೇರಳ-ಮಾಹೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಮೇ 22ರವರೆಗೆ ಸಾಕಷ್ಟು ವ್ಯಾಪಕ ಮಳೆಯಾಗುತ್ತದೆ ಎಂದು ಐಎಂಡಿ ತಿಳಿಸಿದೆ.
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆಯಾಗುತ್ತಿದ್ದು, ಇಂದು ಮತ್ತು ಭಾನುವಾರ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಹೊರತಾಗಿ ದೇಶದ ವಿವಿಧ ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಇಂದು ಅಸ್ಸಾಂ, ಮೇಘಾಲಯ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ಭಾರೀ ಮಳೆಯಿಂದ ಈ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ಬೆಂಗಳೂರಿಗೆ ಹಳದಿ ಅಲರ್ಟ್
ಇಂದು ಕೇರಳ-ಮಾಹೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಹಾವೇರಿ, ಗದಗ, ರಾಯಚೂರು, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ