AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಭಾರೀ ಮಳೆಯಿಂದ ಕೆರೆಯಂತಾದ ಬೆಂಗಳೂರು; ರಾಜ್ಯಾದ್ಯಂತ ಹಬ್ಬದ ದಿನವೂ ನಿಲ್ಲದ ವರುಣನ ಆರ್ಭಟ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

Karnataka Rain: ಭಾರೀ ಮಳೆಯಿಂದ ಕೆರೆಯಂತಾದ ಬೆಂಗಳೂರು; ರಾಜ್ಯಾದ್ಯಂತ ಹಬ್ಬದ ದಿನವೂ ನಿಲ್ಲದ ವರುಣನ ಆರ್ಭಟ
ಮಳೆ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 31, 2022 | 5:38 AM

Share

ಬೆಂಗಳೂರು: ಮಳೆಯ ಅಬ್ಬರದಿಂದ ಬೆಂಗಳೂರಿನ ರಸ್ತೆಗಳಲ್ಲಿ ಮಳೆನೀರು ನದಿಯಂತೆ ತುಂಬಿ ಹರಿಯುತ್ತಿವೆ. ಸಾವಿರಾರು ವಾಹನಗಳು ನೀರಿನಲ್ಲಿ ಮುಳುಗಿವೆ. ಬೆಂಗಳೂರಿನ (Bangalore Rains) ಬೆಳ್ಳಂದೂರು, ಸರ್ಜಾಪುರ, ವೈಟ್​ಫೀಲ್ಡ್​ ರಸ್ತೆಗಳು ಪ್ರವಾಹದ (Karnataka Flood) ನೀರಿನಿಂದ ಆವೃತವಾಗಿವೆ. ಬೆಂಗಳೂರು ಅಕ್ಷರಶಃ ಕೆರೆಯಂತಾಗಿದೆ. ಪಕ್ಕದ ರಾಮನಗರ, ಮೈಸೂರಿನಲ್ಲೂ ಮಳೆಯಿಂದ ಹೆದ್ದಾರಿಗಳೆಲ್ಲ ನದಿಗಳಂತಾಗಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿಯ (Ganesh Chaturthi) ದಿನವಾದ ಇಂದು ಭಾರೀ ಮಳೆಯಾಗಲಿದ್ದು, ಸೆ. 2ರವರೆಗೂ ಮಳೆ ಮುಂದುವರೆಯಲಿದೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಮುಂದಿನ 3 ದಿನಗಳ ಕಾಲ ಕರ್ನಾಟಕದಲ್ಲಿ ನಿರಂತರ ಮಳೆಯಾಗಲಿದ್ದು, ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಅನೇಕ ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ಭಾರೀ ಮಳೆಯಿಂದಾಗಿ ರಜೆ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮೈಸೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಿಂದ ಐವರು ಸಾವನ್ನಪ್ಪಿದ್ದಾರೆ. ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ ಸೇರಿದಂತೆ ಬಹುತೇಕ ಎಲ್ಲ ಕಡೆಗಳಲ್ಲಿ ಮುಂದಿನ 3 ದಿನ ಜೋರಾಗಿ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಿಗೆ ಸೆ. 2ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Kerala rain: ಕೇರಳದಲ್ಲಿ ಭಾರೀ ಮಳೆಗೆ ಒಂದೇ ಕುಟುಂಬದ ಐದು ಜನ ಸಾವು

ಕರ್ನಾಟಕದಲ್ಲಿ ಇಂದು ಕೂಡ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನದಲ್ಲಿ ಉಂಟಾದ ವೈಪರೀತ್ಯಗಳಿಂದ ಕರ್ನಾಟಕದ ಎಲ್ಲ ಭಾಗಗಳಲ್ಲಿ ಸೆಪ್ಟೆಂಬರ್ 2ರವರೆಗೆ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳ ಹಲವೆಡೆ ಇನ್ನೂ 3 ದಿನ ಮಳೆ ಅಬ್ಬರಿಸಲಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆ ಎರಡು-ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ ಮುಂದಿನ ಮೂರ್ನಾಲ್ಕು ದಿನ ಮಳೆ ಅಬ್ಬರಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ಅರಬ್ಬಿ ಸಮುದ್ರದ ಕೇರಳ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಿರುವುದರಿಂದ ರಾಜ್ಯದ ಒಳನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: Karnataka Rain: ಬೆಂಗಳೂರು, ರಾಮನಗರ ಸೇರಿ 17 ಜಿಲ್ಲೆಗಳಲ್ಲಿ ಮಳೆಯ ಆರ್ಭಟ; ಇಂದು ಹಳದಿ ಅಲರ್ಟ್​ ಘೋಷಣೆ

ಮೈಸೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯ ದುರಂತದಿಂದ ಐವರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತವಾಗಿದೆ. ಹಲವೆಡೆ ತೆರೆದ ಮೈದಾನದಲ್ಲಿ ಹಾಕಲಾಗಿದ್ದ ಮಣ್ಣಿನಿಂದ ಮಾಡಿದ ಗಣೇಶ ಮೂರ್ತಿಗಳು ನಾಶವಾಗಿವೆ. ಗೌರಿ- ಗಣೇಶ ಹಬ್ಬಕ್ಕೆ ಊರಿಗೆ ಹೊರಟಿದ್ದ ಜನರು ರಸ್ತೆಯಲ್ಲಿ ನದಿಯಂತೆ ಹರಿಯುತ್ತಿರುವ ಮಳೆ ನೀರಿನಿಂದ ಮುಂದೆ ಸಂಚರಿಸಲಾಗದೆ ಪರದಾಡಿದ ಘಟನೆಯೂ ನಡೆಯಿತು.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರಿಸುತ್ತಿದ್ದು, ನೆರೆಯ ರಾಜ್ಯಗಳಲ್ಲೂ ವರುಣನ ಆರ್ಭಟ ಜೋರಾಗಿದೆ. ಸಿಕ್ಕಿಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಗೋವಾ, ಕೇರಳ, ಲಕ್ಷದ್ವೀಪ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಹರಿಯಾಣ, ರಾಜಸ್ಥಾನ, ಗುಜರಾತ್ ಮತ್ತು ತೆಲಂಗಾಣಗಳಲ್ಲಿ ಕೂಡ ಭಾರೀ ಮಳೆಯಾಗಲಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?