Karnataka Rain: ಮಲೆನಾಡು ಸೇರಿ ಕರ್ನಾಟಕದ 5 ಜಿಲ್ಲೆಗಳಲ್ಲಿ ಮತ್ತೆ ಮಳೆ; ಹಳದಿ ಅಲರ್ಟ್ ಘೋಷಣೆ

Bengaluru Weather Today: ಅ. 20ರಿಂದ 22ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.

Karnataka Rain: ಮಲೆನಾಡು ಸೇರಿ ಕರ್ನಾಟಕದ 5 ಜಿಲ್ಲೆಗಳಲ್ಲಿ ಮತ್ತೆ ಮಳೆ; ಹಳದಿ ಅಲರ್ಟ್ ಘೋಷಣೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 19, 2022 | 6:14 AM

Bangalore Rains: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ (Karnataka Rain) ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಕರ್ನಾಟಕದ 5 ಜಿಲ್ಲೆಗಳಲ್ಲಿ ಇಂದಿನಿಂದ ಅ. 22ರವರೆಗೆ ಹಳದಿ ಅಲರ್ಟ್​ (Yellow Alert)​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ರಾಜ್ಯದ ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲೂ (Bengaluru Rain) ಇನ್ನೆರಡು ದಿನ ಭಾರೀ ಮಳೆ ಸುರಿಯಲಿದೆ.

ಅ. 20ರಿಂದ 22ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಈ ವರ್ಷ ದಾಖಲೆಯ ಪ್ರಮಾಣದ ಮಳೆಯಾಗಿದ್ದು, ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಈ ವರ್ಷ 1706 ಮಿಮೀ ಮಳೆಯಾಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. 2017ರಲ್ಲಿ ಬೆಂಗಳೂರಿನಲ್ಲಿ 1696 ಮಿಮೀ ಮಳೆಯಾಗಿತ್ತು. ಆ ದಾಖಲೆಯನ್ನು ಈ ವರ್ಷದ ಮಳೆ ಮುರಿದಿದೆ. ಇಂದಿನಿಂದ 4 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ವರುಣನ ಆರ್ಭಟ; ಬೆಂಗಳೂರಿನಲ್ಲಿ ಸಾರ್ವಕಾಲಿಕ ದಾಖಲೆಯ ಮಳೆ

ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಭಾರೀ ಮಳೆ ಇರಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ನೀಡಲಾಗಿದೆ.

ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯನ್ನು ನಿರೀಕ್ಷಿಸಲಾಗಿದೆ. ಮಹಾರಾಷ್ಟ್ರದ ಪುಣೆಯಲ್ಲೂ ದಾಖಲೆಯ ಮಳೆ ಸುರಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ