Karnataka Rain: ಮಲೆನಾಡು, ಕರಾವಳಿಯಲ್ಲಿ ಇನ್ನೂ 4 ದಿನ ವ್ಯಾಪಕ ಮಳೆ; ಇಂದಿನಿಂದ ಚಳಿಯೂ ಹೆಚ್ಚಳ

| Updated By: ಸುಷ್ಮಾ ಚಕ್ರೆ

Updated on: Nov 06, 2022 | 6:36 AM

Bangalore Weather Today: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ಇಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೇ, ಇಂದಿನಿಂದ ರಾಜ್ಯಾದ್ಯಂತ ಚಳಿ ಹೆಚ್ಚಾಗಲಿದೆ.

Karnataka Rain: ಮಲೆನಾಡು, ಕರಾವಳಿಯಲ್ಲಿ ಇನ್ನೂ 4 ದಿನ ವ್ಯಾಪಕ ಮಳೆ; ಇಂದಿನಿಂದ ಚಳಿಯೂ ಹೆಚ್ಚಳ
ಕರ್ನಾಟಕದಲ್ಲಿ ಮಳೆ
Image Credit source: Deccan Herald
Follow us on

Bengaluru Rain: ಕರ್ನಾಟಕದ (Karnataka Rain) ಬೆಂಗಳೂರು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಇಂದಿನಿಂದ ನವೆಂಬರ್ 9ರವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ವ್ಯಾಪಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ಹಾಗೇ, ಇಂದಿನಿಂದ ರಾಜ್ಯಾದ್ಯಂತ ಚಳಿ ಹೆಚ್ಚಾಗಲಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Puducherry Rain: ಪುದುಚೆರಿಯಲ್ಲಿ ಭಾರೀ ಮಳೆ; ಇನ್ನೆರಡು ದಿನ ಶಾಲೆಗಳಿಗೆ ರಜೆ ಘೋಷಣೆ

ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನ. 9ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಇಂದು ಮಳೆಯಾಗಲಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸುತ್ತಮುತ್ತ ಮಂಜು ಕವಿಯುವ ಸಾಧ್ಯತೆಯಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ದಕ್ಷಿಣ ತಮಿಳುನಾಡು ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ. ಇಂದು ದಕ್ಷಿಣ ಅಸ್ಸಾಂ ಸುತ್ತಲೂ ಮಂಜು ಕವಿಯುವ ಸಾಧ್ಯತೆಯಿದೆ. ಇಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್- ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚದುರಿದ ಮಳೆ ಬೀಳುವ ಸಾಧ್ಯತೆಯಿದೆ. ಇಂದು ಉತ್ತರಾಖಂಡದಲ್ಲಿ ಹಿಮಪಾತವಾಗಲಿದೆ. ನೀಲಗಿರಿ, ಕರೂರ್, ಕಡಲೂರು, ಅರಿಯಲೂರು, ತಿರುವರೂರು ಮತ್ತು ತಂಜಾವೂರುಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದೆಹಲಿಯಲ್ಲಿ ಇಂದಿನಿಂದ ವಿಪರೀತ ಗಾಳಿ ಶುರುವಾಗಲಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಮಳೆಯ ಅಬ್ಬರ; ಕರಾವಳಿ, ಮಲೆನಾಡಿಗೆ ಹಳದಿ ಅಲರ್ಟ್​ ಘೋಷಣೆ

ಇಂದು ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕಡಲೂರು, ಅರಿಯಲೂರು, ಮೈಲಾಡುತುರೈ, ತಂಜಾವೂರು, ತಿರುವರೂರು, ನೀಲಗಿರಿ ಮತ್ತು ಕರೂರ್ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ಬೆಂಗಳೂರು ಸುತ್ತಮುತ್ತ ಮಂಜು ಕವಿಯುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ