AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಧಾರವಾಡ, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

Karnataka Rain: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಮಳೆImage Credit source: The New Indian Express
ನಯನಾ ರಾಜೀವ್
|

Updated on: Dec 17, 2023 | 7:36 AM

Share

ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಧಾರವಾಡ, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಡಿಸೆಂಬರ್ 20ರವರೆಗೂ ಮಳೆಯಾಗಲಿದೆ.

ವಿಜಯಪುರದಲ್ಲಿ 12.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain Alert: ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.17ರಿಂದ ಎರಡು ದಿನಗಳ ಕಾಲ ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 26.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್