ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಧಾರವಾಡ, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಡಿಸೆಂಬರ್ 20ರವರೆಗೂ ಮಳೆಯಾಗಲಿದೆ.
ವಿಜಯಪುರದಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಮತ್ತಷ್ಟು ಓದಿ: Karnataka Rain Alert: ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.17ರಿಂದ ಎರಡು ದಿನಗಳ ಕಾಲ ಮಳೆ
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ