ಬೆಂಗಳೂರು: ಕರ್ನಾಟಕದ (Karnataka Rain) ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಇಂದು (ಮಂಗಳವಾರ) ಹಳದಿ ಅಲರ್ಟ್ (Yellow Alert) ನೀಡಲಾಗಿದೆ. ಕರ್ನಾಟಕದ ಸುಮಾರು 20 ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಲಾಗಿದೆ. ಕರಾವಳಿಯ 3 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಇನ್ನೂ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 5ರವರೆಗೆ ಉತ್ತರ ಕನ್ನಡ, ಶಿವಮೊಗ್ಗ, ಬೀದರ್, ಕಲಬುರ್ಗಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳು ಕಳೆದ ವರ್ಷದ ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಮಳೆ ಕೊರತೆಯನ್ನು ಎದುರಿಸಿತ್ತು. ಆದರೆ, ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ.
ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ಮಳೆ, ಚಳಿಯ ವಾತಾವರಣವಿತ್ತು. ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬುಧವಾರ ಕೂಡ ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಿಂದ 25 ಜನ ಸಾವು; ಶಾಲೆಗಳಿಗೆ ರಜೆ ಘೋಷಣೆ
ಇಂದಿನಿಂದ ಅ. 12ರವರೆಗೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ, ಗದಗ, ಯಾದಗಿರಿ, ರಾಯಚೂರು, ಕಲಬುರ್ಗಿ, ಕೊಪ್ಪಳ, ತುಮಕೂರು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇಂದು (ಅ. 11) ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ಹಲವು ದಿನಗಳ ಬಳಿಕ ಮತ್ತೆ ಮಳೆಯಾಗುತ್ತಿದೆ. ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮಧ್ಯ ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯದಿಂದ ಮಳೆಯಾಗುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Karnataka Rain: ಕರಾವಳಿಯಲ್ಲಿ ತಗ್ಗಿದ ಮಳೆ; ಬೆಂಗಳೂರು, ಶಿವಮೊಗ್ಗ ಸೇರಿ 20 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ವಿದರ್ಭ, ಛತ್ತೀಸ್‌ಗಢ, ರಾಯಲಸೀಮಾ, ಪುದುಚೇರಿ, ಕಾರೈಕಲ್, ತಮಿಳುನಾಡುಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
Heavy rainfall spell likely to continue over Uttarakhand, Uttar Pradesh, West Madhya Pradesh and East Rajasthan during next 2 days.
Heavy rainfall spell over Tamilnadu & Rayalaseema during next 5 days and over Coastal Andhra Pradesh & Telangana during next 24 hours. pic.twitter.com/DFlMYJTQIo— India Meteorological Department (@Indiametdept) October 9, 2022
ಒಡಿಶಾ, ಉತ್ತರಾಖಂಡ, ಹರಿಯಾಣ, ಚಂಡೀಗಢ, ದೆಹಲಿ, ಕೊಂಕಣ, ಗೋವಾ, ಆಂಧ್ರಪ್ರದೇಶ, ಯಾನಂ, ತೆಲಂಗಾಣ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದಂತೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಪಂಜಾಬ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪೂರ್ವ ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ.