Karnataka Rain: ಬೆಂಗಳೂರು, ಚಿಕ್ಕಮಗಳೂರು, ಕೊಡಗು ಸೇರಿ ಬಹುತೇಕ ಕಡೆ ಇಂದು ಗುಡುಗು ಸಹಿತ ಭಾರೀ ಮಳೆ

| Updated By: ಸುಷ್ಮಾ ಚಕ್ರೆ

Updated on: Oct 12, 2022 | 6:10 AM

Bengaluru Rain: ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

Karnataka Rain: ಬೆಂಗಳೂರು, ಚಿಕ್ಕಮಗಳೂರು, ಕೊಡಗು ಸೇರಿ ಬಹುತೇಕ ಕಡೆ ಇಂದು ಗುಡುಗು ಸಹಿತ ಭಾರೀ ಮಳೆ
ಮಳೆ
Follow us on

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ (Karnataka Rain). ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್ (Yellow Alert)ಘೋಷಿಸಿದೆ. ಬೆಂಗಳೂರಿನಲ್ಲಿ (Bangalore Rains) ಇಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)  ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ‘ಹಳದಿ’ ಅಲರ್ಟ್ ನೀಡಿದೆ.

ಮುಂದಿನ 4 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಉತ್ತರ ತಮಿಳುನಾಡು ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀವರೆಗೆ ವಿಸ್ತರಿಸಿದೆ. ಕರ್ನಾಟಕದ ಒಳನಾಡಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ತೇವಾಂಶದ ವಾತಾವರಣವಿರಲಿದ್ದು, ಬೆಂಗಳೂರು, ಕೊಡಗು, ಚಿಕ್ಕಮಗಳೂರು, ತುಮಕೂರು, ಕೋಲಾರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವಿಶೇಷವಾಗಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಹವಾಮಾನ ಇಲಾಖೆಯ ಪ್ರಕಾರ, ಇಂದು ಕರ್ನಾಟಕದ ಒಳನಾಡಿನ ಭಾಗದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕವಾದ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ರಾಮನಗರ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಹಾವೇರಿ, ವಿಜಯನಗರ, ಬಳ್ಳಾರಿ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೋಲಾರ ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೆಎಸ್‌ಎನ್‌ಡಿಎಂಸಿ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Karnataka Rain: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ

ಅಕ್ಟೋಬರ್ 5ರವರೆಗೆ ಉತ್ತರ ಕನ್ನಡ, ಶಿವಮೊಗ್ಗ, ಬೀದರ್, ಕಲಬುರ್ಗಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳು ಕಳೆದ ವರ್ಷದ ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಮಳೆ ಕೊರತೆಯನ್ನು ಎದುರಿಸಿತ್ತು. ಆದರೆ, ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ.

ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ಮಳೆ, ಚಳಿಯ ವಾತಾವರಣವಿತ್ತು. ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇಂದು ಕೂಡ ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rain Updates: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸುರಿದ ಮಳೆ

ಇಂದಿನಿಂದ ಅ. 15ರವರೆಗೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ, ಗದಗ, ಯಾದಗಿರಿ, ರಾಯಚೂರು, ಕಲಬುರ್ಗಿ, ಕೊಪ್ಪಳ, ತುಮಕೂರು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಅರುಣಾಚಲ ಪ್ರದೇಶದಲ್ಲಿ ವ್ಯಾಪಕವಾದ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಛತ್ತೀಸ್‌ಗಢ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಗುಜರಾತ್‌ನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ