ಬೆಂಗಳೂರು: ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕರ್ನಾಟಕದ (Karnataka Rain) ಹಲವು ಜಿಲ್ಲೆಗಳಲ್ಲಿ ಅ. 15ರವರೆಗೆ ಭಾರೀ ಮಳೆಯಾಗಲಿದೆ. ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್ (Yellow Alert) ಘೋಷಿಸಿದೆ. ಈ ತಿಂಗಳ ಆರಂಭದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಿಂದ 13 ಜನರು ಸಾವನ್ನಪ್ಪಿದ್ದಾರೆ. ಜಾನುವಾರುಗಳು ಮತ್ತು ಆಸ್ತಿಗಳಿಗೆ ದೊಡ್ಡ ಪ್ರಮಾಣದ ಹಾನಿ ಸಂಭವಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಗುರುವಾರ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ‘ಹಳದಿ’ ಅಲರ್ಟ್ ನೀಡಲಾಗಿದೆ.
ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಇಂದು ಕರ್ನಾಟಕದ ಒಳನಾಡಿನ ಭಾಗದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕವಾದ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: Karnataka Rain: ಬೆಂಗಳೂರು, ಚಿಕ್ಕಮಗಳೂರು, ಕೊಡಗು ಸೇರಿ ಬಹುತೇಕ ಕಡೆ ಇಂದು ಗುಡುಗು ಸಹಿತ ಭಾರೀ ಮಳೆ
ಬೆಂಗಳೂರಿನಲ್ಲಿ ಇಂದು ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿಗಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಹಾಗೇ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗಲಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ.
ಇನ್ನು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿನ ಪ್ರದೇಶಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ.
ಅಕ್ಟೋಬರ್ 1ರಿಂದ ಮಳೆಯಿಂದಾಗಿ ಕರ್ನಾಟಕದಲ್ಲಿ 28 ಜಾನುವಾರುಗಳು ಸಾವನ್ನಪ್ಪಿವೆ, 3,309 ಮನೆಗಳಿಗೆ ಹಾನಿಯಾಗಿದೆ, ಸುಮಾರು 6,279 ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಸರ್ಕಾರ ಐದು ಪರಿಹಾರ ಶಿಬಿರಗಳನ್ನು ತೆರೆದಿದ್ದು, 1,330 ಸಂತ್ರಸ್ತ ಜನರು ಆಶ್ರಯ ಪಡೆಯುತ್ತಿದ್ದಾರೆ. ಅಕ್ಟೋಬರ್‌ನಲ್ಲಿ ಸಂಭವಿಸಿದ ಮಳೆ ಹಾನಿಗೆ ಪರಿಹಾರವನ್ನು ತಕ್ಷಣವೇ ಜಂಟಿ ಸಮೀಕ್ಷೆ ನಡೆಸಿ ಈ ತಿಂಗಳೊಳಗೆ ವಿತರಿಸಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.
BBMP Rainfall Forecast: Widespread moderate to heavy rains associated with thunderstorms and lightning are likely over the BBMP area. pic.twitter.com/mKBiKsHNKN
— KSNDMC (@KarnatakaSNDMC) October 12, 2022
ರಾಜ್ಯದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ರಾಮನಗರ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಹಾವೇರಿ, ವಿಜಯನಗರ, ಬಳ್ಳಾರಿ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೋಲಾರ ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ
ಇಂದಿನಿಂದ ಅ. 15ರವರೆಗೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ, ಗದಗ, ಯಾದಗಿರಿ, ರಾಯಚೂರು, ಕಲಬುರ್ಗಿ, ಕೊಪ್ಪಳ, ತುಮಕೂರು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗಲಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಅರುಣಾಚಲ ಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ, ಗೋವಾ, ಕರ್ನಾಟಕ, ಕೇರಳ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಮಹಾರಾಷ್ಟ್ರ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಸಿಕ್ಕಿಂ, ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.