Karnataka Rain: ಕರ್ನಾಟಕದ ಕರಾವಳಿಯಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ; ಬೆಂಗಳೂರಿನಲ್ಲೂ ವರುಣನ ಆರ್ಭಟ
Karnataka Weather Today: ಮಹಾರಾಷ್ಟ್ರದ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮುಂದಿನ 3 ದಿನ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
Bengaluru Rain: ಕರ್ನಾಟಕದಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ (IMD) ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆ ಅಬ್ಬರಿಸಲಿದೆ. ಇಂದಿನಿಂದ ಮಾರ್ಚ್ 28ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೇಸಿಗೆಯಲ್ಲಿ ಜಾಸ್ತಿ ತಾಪಮಾನ ಉಂಟಾಗುವ ಸಾಧ್ಯತೆಯಿದೆ. ಏಪ್ರಿಲ್ – ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ ಗರಿಷ್ಟ ತಾಪಮಾನ 37 ಡಿಗ್ರಿ ಸೆಲ್ಷಿಯಸ್ತನಕ ಇರಲಿದೆ.
ಮುಂದಿನ 3 ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮಹಾರಾಷ್ಟ್ರದ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕಕ್ಕೂ ಮಳೆಯ ಪರಿಣಾಮ ತಟ್ಟಲಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 28ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಈ ಭಾಗದಲ್ಲಿ ಇಂದು ಗುಡುಗು, ಸಿಡಿಲಿನ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಮಾರ್ಚ್ 26ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 27, 28ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ.
IMD ಪ್ರಕಾರ ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳು ಮಾರ್ಚ್ 28ರವರೆಗೆ ಚದುರಿದ ಮಳೆಯಾಗಲಿದೆ. ಮುಂದಿನ ಸೋಮವಾರದ ನಂತರವೂ ಈ ರಾಜ್ಯಗಳಲ್ಲಿ ಆರ್ದ್ರ ಪರಿಸ್ಥಿತಿಗಳು ಮುಂದುವರಿಯಬಹುದು. ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾದಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆ ಹೆಚ್ಚಾಗಲಿದೆ. ಮುಂದಿನ ಎರಡು ದಿನಗಳವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ.
ಇದನ್ನೂ ಓದಿ: Karnataka Rain: ಕರ್ನಾಟಕ, ಕೇರಳ, ತಮಿಳುನಾಡು ಸೇರಿ ಹಲವೆಡೆ ಇಂದು ಗುಡುಗು ಸಹಿತ ಮಳೆ; ಬೆಂಗಳೂರಿನ ಹವಾಮಾನ ಹೀಗಿದೆ