ಬೆಂಗಳೂರು: ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಇಂದು ಕೂಡ ಮಳೆ (Rain in Karnataka) ಮುಂದುವರೆಯಲಿದೆ. ಇಂದು ಕರ್ನಾಟಕದ (Karnataka Rains) ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಕರಾವಳಿ ಜಿಲ್ಲೆಗಳು, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಮಲೆನಾಡಿನಲ್ಲಿ ಹಗುರ ಮಳೆಯಾಗಲಿದೆ. ಏ.25ರಂದು ಕರಾವಳಿಯ ಎಲ್ಲಾ ಜಿಲ್ಲೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕ ಮಾತ್ರವಲ್ಲದೆ ಬೇರೆ ರಾಜ್ಯಗಳಲ್ಲೂ ಮಳೆ ಮುಂದುವರೆದಿದೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್‌ನಲ್ಲೂ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಇಂದು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು, ಪಶ್ಚಿಮ ಘಟ್ಟಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರ್ಗಿ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಧಾರವಾಡ, ಬೀದರ್ ಹಾಗೂ ದಕ್ಷಿಣ ಒಳನಾಡಿನ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಗುಡುಗು- ಮಿಂಚು ಸಹಿತ ಮಳೆಯಾಗಲಿದೆ.
ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವುದರಿಂದ ಕರ್ನಾಟಕದಲ್ಲಿ ಇನ್ನು ಕೆಲವು ದಿನ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಇಂದು ಮಳೆಯಾಗಲಿದೆ.
ಏಪ್ರಿಲ್ 27ರಿಂದ ಈಶಾನ್ಯ ಭಾರತದಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಹವಾಮಾನ ಇಲಾಖೆಯು ಗುಜರಾತ್‌ನಲ್ಲಿ ಏಪ್ರಿಲ್ 27ರವರೆಗೆ ಬಿಸಿ ಅಲೆಯು ಮೇಲುಗೈ ಸಾಧಿಸುತ್ತದೆ. ಏಪ್ರಿಲ್ 25ರಿಂದ ವಾಯುವ್ಯ ಮತ್ತು ಮಧ್ಯ ಭಾರತದ ಬಯಲು ಪ್ರದೇಶಗಳನ್ನು ಆವರಿಸುವ ಸಾಧ್ಯತೆಯಿದೆ. ಛತ್ತೀಸ್‌ಗಢದಲ್ಲಿ ಇಂದು ಗುಡುಗು, ಮಿಂಚು ಸಹಿತ ಚದುರಿದ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ವಿದರ್ಭ ಮತ್ತು ಪಶ್ಚಿಮ ಬಂಗಾಳದಲ್ಲಿ ಇದೇ ರೀತಿಯ ಪರಿಸ್ಥಿತಿಗಳು ಇರುತ್ತವೆ. ದಕ್ಷಿಣ ಮಧ್ಯ ಮಹಾರಾಷ್ಟ್ರದಲ್ಲಿ ಇಂದು ಕೂಡ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 4 ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್-ಮಣಿಪುರ-ಮಿಜೋರಾಂ-ತ್ರಿಪುರಾದಲ್ಲಿ ಲಘು ಮಳೆಯಾಗಲಿದೆ. ಮುಂದಿನ 4 ದಿನಗಳಲ್ಲಿ ಉಪ-ಹಿಮಾಲಯದ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಈ ಹವಾಮಾನ ಪರಿಸ್ಥಿತಿಗಳೊಂದಿಗೆ ಇಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಬಿಹಾರ, ಜಾರ್ಖಂಡ್, ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ ಕೂಡ ಏಪ್ರಿಲ್ 25ರಿಂದ 27ರವರೆಗೆ ಶಾಖದ ಅಲೆಯನ್ನು ಎದುರಿಸಲಿದೆ ಎಂದು IMD ತಿಳಿಸಿದೆ.
ಇದನ್ನೂ ಓದಿ: Karnataka Rain: ಉತ್ತರ ಕರ್ನಾಟಕದಲ್ಲಿ ವರುಣನ ಆರ್ಭಟ; ಬೆಂಗಳೂರು, ಮಲೆನಾಡಿನಲ್ಲೂ ಇನ್ನೆರಡು ದಿನ ಮಳೆ