AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ವರುಣನ ಆರ್ಭಟ; ಬೆಂಗಳೂರಿನಲ್ಲಿ ಸಾರ್ವಕಾಲಿಕ ದಾಖಲೆಯ ಮಳೆ

Bengaluru Rains: ಬೆಂಗಳೂರಿನಲ್ಲಿ ಈ ವರ್ಷ 1706 ಮಿಮೀ ಮಳೆಯಾಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. 2017ರಲ್ಲಿ ಬೆಂಗಳೂರಿನಲ್ಲಿ 1696 ಮಿಮೀ ಮಳೆಯಾಗಿತ್ತು.

Karnataka Rain: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ವರುಣನ ಆರ್ಭಟ; ಬೆಂಗಳೂರಿನಲ್ಲಿ ಸಾರ್ವಕಾಲಿಕ ದಾಖಲೆಯ ಮಳೆ
ಮಳೆ
TV9 Web
| Edited By: |

Updated on: Oct 18, 2022 | 5:39 AM

Share

Bangalore Rains: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಭೀತಿ ಎದುರಾಗಿದೆ. ಇದರ ಪರಿಣಾಮವಾಗಿ ಕರ್ನಾಟಕದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಕರ್ನಾಟಕದಾದ್ಯಂತ ಇನ್ನೆರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಬೆಂಗಳೂರಿನಲ್ಲಿ (Bengaluru Rain) ಈ ವರ್ಷ ದಾಖಲೆಯ ಪ್ರಮಾಣದ ಮಳೆಯಾಗಿದ್ದು, ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಈ ವರ್ಷ 1706 ಮಿಮೀ ಮಳೆಯಾಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. 2017ರಲ್ಲಿ ಬೆಂಗಳೂರಿನಲ್ಲಿ 1696 ಮಿಮೀ ಮಳೆಯಾಗಿತ್ತು. ಆ ದಾಖಲೆಯನ್ನು ಈ ವರ್ಷದ ಮಳೆ ಮುರಿದಿದೆ. ಇಂದಿನಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert)​ ನೀಡಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಭಾರೀ ಮಳೆ ಇರಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rains: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ, ರಾಜ್ಯದ ಉದ್ದಗಲಕ್ಕೂ ಮುಂದುವರೆದ ವರ್ಷಧಾರೆ

ಇಂದು ತುಮಕೂರು, ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ, ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಆಂಧ್ರಪ್ರದೇಶ, ಯಾನಂನಲ್ಲಿ ಮೇಲೆ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗಲಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮರಾಠವಾಡ, ವಿದರ್ಭ, ಛತ್ತೀಸ್‌ಗಢ, ರಾಯಲಸೀಮಾ ಮತ್ತು ತೆಲಂಗಾಣದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಜಾರ್ಖಂಡ್, ಬಿಹಾರ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗುಜರಾತ್ ಪ್ರದೇಶದಲ್ಲಿ ಮಿಂಚಿನ ಸಾಧ್ಯತೆಯೊಂದಿಗೆ ಪ್ರತ್ಯೇಕವಾದ ಮಳೆಯಾಗುವ ಸಾಧ್ಯತೆಯಿದೆ. ಲಡಾಖ್‌ನ ಎತ್ತರದ ಪ್ರದೇಶಗಳಲ್ಲಿ ಸ್ವಲ್ಪ ಹಿಮ ಬೀಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು