Karnataka Rain: ಕರ್ನಾಟಕದಲ್ಲಿ ಇನ್ನೂ 4 ದಿನ ವರುಣನ ಆರ್ಭಟ; ಇಂದಿನಿಂದ ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಳ

Karnataka Weather Today: ಇಂದಿನಿಂದ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಮೇ 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ.

Karnataka Rain: ಕರ್ನಾಟಕದಲ್ಲಿ ಇನ್ನೂ 4 ದಿನ ವರುಣನ ಆರ್ಭಟ; ಇಂದಿನಿಂದ ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಳ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 05, 2022 | 5:55 AM

Bengaluru Rains: ಬೆಂಗಳೂರಿನಲ್ಲಿ (Bangalore Rain) ನಿನ್ನೆ ಸಂಜೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಕರ್ನಾಟಕದ ಹಲವೆಡೆ ಇನ್ನೂ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ಕೂಡ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾಗೇ, ಮುಂದಿನ 4 ದಿನಗಳ ಕಾಲ ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಮೇ 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಕೂಡ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇಂದಿನಿಂದ (ಮೇ 5) ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

ಮೇ 8ರವರೆಗೆ ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಕೇರಳದಲ್ಲಿ ಇಂದು ಮಲಪ್ಪುರಂ ಮತ್ತು ಇಡುಕ್ಕಿಯಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಆದರೆ, ರಾಜ್ಯ ರಾಜಧಾನಿ ತಿರುವನಂತಪುರಂ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಚಂಡಮಾರುತ ಉಂಟಾಗಲಿದೆ. ತಮಿಳುನಾಡಿನ ವೆಲ್ಲೂರು, ತಿರುಪ್ಪತ್ತೂರು, ತಿರುವಣ್ಣಾಮಲೈ, ಸೇಲಂ, ಧರ್ಮಪುರಿ, ಕೃಷ್ಣಗಿರಿ ಮತ್ತು ನೀಲಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಇತರ ಜಿಲ್ಲೆಗಳಲ್ಲಿ ಲಘುವಾಗಿ ಮಧ್ಯಮ ಮಳೆಯಾಗಲಿದೆ.

ಮಳೆ ಕುರಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ