Karnataka Rain: ಕರ್ನಾಟಕ, ಕೇರಳ, ತಮಿಳುನಾಡು ಸೇರಿ ಹಲವೆಡೆ ಇಂದು ಗುಡುಗು ಸಹಿತ ಮಳೆ; ಬೆಂಗಳೂರಿನ ಹವಾಮಾನ ಹೀಗಿದೆ
Karnataka Weather Today: ಕರ್ನಾಟಕ ಮತ್ತು ಕೇರಳದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗೋವಾ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
Bengaluru Rain: ಬೆಂಗಳೂರು: ಅಂಡಮಾನ್ ನಿಕೋಬಾರ್ ಸಮುದ್ರದಲ್ಲಿ ವಾಯುಭಾರ ಕುಸಿತ ತೀವ್ರಗೊಂಡಿದ್ದರಿಂದ ಬೆಂಗಳೂರು (Bangalore Rains) ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮುಂತಾದ ಹಲವು ಪ್ರದೇಶಗಳಲ್ಲಿ ಇಂದು ತುಂತುರು ಮಳೆಯಾಗುವ ನಿರೀಕ್ಷೆ ಇದೆ. ಮೂರು ದಿನಗಳಿಂದ ಬೆಂಗಳೂರು, ಮಂಗಳೂರು, ಉಡುಪಿ, ಶಿವಮೊಗ್ಗ, ಮೈಸೂರು, ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆ ಸುರಿಯುತ್ತಿದೆ. ಈ ಜಿಲ್ಲೆಗಳಲ್ಲಿ ಇಂದು ಕೂಡ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರ್ನಾಟಕದಲ್ಲಿ ಇಂದು ದಕ್ಷಿಣ ಒಳಭಾಗ ಮತ್ತು ಕರಾವಳಿಯಾದ್ಯಂತ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ರಾಮನಗರದಲ್ಲಿ ಇಂದು (ಮಾರ್ಚ್ 24) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಮತ್ತು ನೈಋತ್ಯ ಕರ್ನಾಟಕದ ಇತರ ಭಾಗಗಳಲ್ಲಿ ಇಂದು ಮಳೆ ಮುಂದುವರಿಯುತ್ತದೆ. ಈ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚುಗಳ ಸಹಿತ ಚದುರಿದ ಮಳೆಯಾಗಲಿದೆ. ಮುಂದಿನ 3 ದಿನಗಳ ಕಾಲ ಇಡೀ ದಕ್ಷಿಣ ಭಾರತದಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಆರ್ದ್ರ ವಾತಾವರಣವಿದ್ದು, ಉತ್ತರ ಜಿಲ್ಲೆಗಳಾದ ಗದಗ, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ರಾಯಚೂರಿನಲ್ಲಿ ಮಳೆಯಾಗಲಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ಕೋಲಾರದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ಕೋಲಾರದಲ್ಲಿ ಮಳೆ ಹೆಚ್ಚಾಗಲಿದೆ.
ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಮತ್ತು ಕೋಲಾರದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮ್ಯಾನ್ಮಾರ್ ಮತ್ತು ಪಕ್ಕದ ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತವು ಉತ್ತರ-ಈಶಾನ್ಯಕ್ಕೆ ಚಲಿಸುತ್ತಿದೆ. ಒಳನಾಡು ಪ್ರದೇಶಕ್ಕೆ ನುಸುಳುವುದರಿಂದ ಶೀಘ್ರದಲ್ಲಿಯೇ ಇದು ಕಡಿಮೆ ಒತ್ತಡದ ಪ್ರದೇಶವಾಗಿ ಮಾರ್ಪಡಲಿದೆ. ಮುಂದಿನ 3 ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಅಲ್ಲಲ್ಲಿ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕ ಮತ್ತು ಕೇರಳದಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗೋವಾ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಇಂದು ಬಿಸಿ ಗಾಳಿ ಹೆಚ್ಚಾಗಲಿದೆ.
ಇದನ್ನೂ ಓದಿ: Karnataka Weather Today: ಕರಾವಳಿ, ಮಲೆನಾಡಿನಲ್ಲಿ ಇಂದು ತುಂತುರು ಮಳೆ; ಕೇರಳ, ತಮಿಳುನಾಡಿನಲ್ಲಿ ವರುಣನ ಆರ್ಭಟ