Karnataka Rain: ಬೆಂಗಳೂರು, ಉತ್ತರ ಕನ್ನಡ, ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ
Karnataka Weather Today: ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಏ. 6ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರು (Bengaluru Rain) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ತಮಿಳುನಾಡಿನ (Tamil Nadu Rains) ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ (Karnataka Weather Today) ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಏ. 6ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 2 ದಿನ ಬೆಂಗಳೂರು, ಮೈಸೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಏ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 2 ದಿನ ಬೆಂಗಳೂರು, ಮೈಸೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಹಾಗೂ ನಾಳೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇಂದು (ಮಂಗಳವಾರ) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಸಿಕ್ಕಿಂನಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಳನಾಡಿನ ಕರ್ನಾಟಕ ಮತ್ತು ಕೇರಳದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದ ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನ, ದಕ್ಷಿಣ ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಗುಜರಾತ್‌ನಲ್ಲಿ ಬಿಸಿಗಾಳಿ ಪರಿಸ್ಥಿತಿಗಳು ಕಂಡುಬರುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ಬೆಂಗಳೂರು, ಕೊಡಗು, ಮೈಸೂರಿನಲ್ಲಿಂದು ಗುಡುಗು ಸಹಿತ ಮಳೆ
Karnataka Rain: ಕರ್ನಾಟಕದಲ್ಲಿ ವರುಣನ ಆರ್ಭಟ; ಬೆಂಗಳೂರು, ಕೊಡಗು, ಮೈಸೂರಿನಲ್ಲಿ ಇನ್ನೆರಡು ದಿನ ಮಳೆ