Bengaluru Rain: ಇಂದಿನಿಂದ ಕರಾವಳಿಯಲ್ಲಿ ಮತ್ತೆ ಮಳೆ; ಬೆಂಗಳೂರಿನಲ್ಲೂ ವರುಣನ ಆರ್ಭಟ ಸಾಧ್ಯತೆ

| Updated By: ಸುಷ್ಮಾ ಚಕ್ರೆ

Updated on: Apr 30, 2022 | 6:02 AM

Karnataka Weather Today: ಇಂದಿನಿಂದ ಬೆಂಗಳೂರು, ಕೊಡಗು ಸೇರಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ.

Bengaluru Rain: ಇಂದಿನಿಂದ ಕರಾವಳಿಯಲ್ಲಿ ಮತ್ತೆ ಮಳೆ; ಬೆಂಗಳೂರಿನಲ್ಲೂ ವರುಣನ ಆರ್ಭಟ ಸಾಧ್ಯತೆ
ಮಳೆ
Follow us on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದು ಬೆಳಗಾವಿ, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉಡುಪಿ, ಕೊಡಗಿನಲ್ಲಿ ಮಳೆ ಮುಂದುವರೆಯಲಿದೆ. ಬೆಂಗಳೂರು ನಗರ, (Bangalore Rains) ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಹಾಸನ ಜಿಲ್ಲೆಗಳಲ್ಲಿ ಕೂಡ ಮಳೆಯ ಮುನ್ಸೂಚನೆ ನೀಡಲಾಗಿದೆ. ಇನ್ನೆರಡು ದಿನ ರಾಜ್ಯದಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಕಡಿಮೆಯಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ.

ಕರ್ನಾಟಕದ ಬೆಳಗಾವಿ, ಕೊಪ್ಪಳ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ. 1ರವರೆಗೂ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲುನೊಂದಿಗೆ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಹೆಚ್ಚಾಗಲಿದೆ. ಇದಲ್ಲದೆ, ಕೇರಳದಲ್ಲಿ ಮಾರ್ಚ್ 31ರ ಅಂತ್ಯದ ವೇಳೆಗೆ ಮಳೆಯ ಪ್ರಮಾಣ ಶೇ. 98ರಷ್ಟು ಹೆಚ್ಚಾಗಿದೆ. ಮಧ್ಯ ಭಾರತ ಮತ್ತು ಉತ್ತರ ಭಾರತದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆಯ ಚಟುವಟಿಕೆಯು ಕಳಪೆ ಮಟ್ಟದಲ್ಲಿದ್ದರೂ, ದಕ್ಷಿಣ ಭಾರತದಲ್ಲಿ ಮಳೆ ಉತ್ತಮವಾಗಿದೆ. ತಮಿಳುನಾಡಿನಲ್ಲಿ ಶೇ. 42, ಕರಾವಳಿ ಕರ್ನಾಟಕದಲ್ಲಿ ಶೇ. 143, ಉತ್ತರ ಒಳ ಕರ್ನಾಟಕದಲ್ಲಿ ಶೇ 43, ದಕ್ಷಿಣ ಒಳನಾಡಿನಲ್ಲಿ ಶೇ. 84ರಷ್ಟು ಹೆಚ್ಚುವರಿ ಮಳೆಯಾಗಿದೆ.

ಉತ್ತರ ಭಾರತದ ಕೆಲವು ಭಾಗಗಳಲ್ಲಿ ಮೇ 4 ಮತ್ತು 7ರ ವೇಳೆಗೆ ಉಷ್ಣ ಅಲೆ ಉಂಟಾಗಲಿದೆ. ಪಂಜಾಬ್, ಹರಿಯಾಣ, ದೆಹಲಿಯಲ್ಲಿ ಬಿರುಗಾಳಿ, ಗುಡುಗು ಮತ್ತು ಮಳೆಯ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಕೇರಳ, ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಮುಂದಿನ 3 ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 2ರಿಂದ ರಾಜಸ್ಥಾನ, ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಮೇ 2ರಿಂದ 4ರವರೆಗೆ ರಾಜಸ್ಥಾನ, ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮಳೆ ಕುರಿತ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಶ್ಚಿಮ ರಾಜಸ್ಥಾನ, ಪಂಜಾಬ್, ಹರಿಯಾಣ, ದೆಹಲಿ, ಪಶ್ಚಿಮ ಉತ್ತರ ಪ್ರದೇಶ, ಮಧ್ಯ ಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಹವಾಮಾನ ಇಲಾಖೆ ಮೇ 1ರವರೆಗೆ ‘ಹಳದಿ ಅಲರ್ಟ್’ ಘೋಷಿಸಿದೆ. ಹವಾಮಾನ ಇಲಾಖೆಯ ಪ್ರಕಾರ, ಮೇ 4ರಂದು ಅಂಡಮಾನ್ ನಿಕೋಬಾರ್ ಸಮುದ್ರದಲ್ಲಿ ಚಂಡಮಾರುತ ಉಂಟಾಗಲಿದೆ. ಪೂರ್ವ ಭಾರತದಲ್ಲಿ, ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಂತಹ ರಾಜ್ಯಗಳಲ್ಲಿ ತಾಪಮಾನವು ಈಗಾಗಲೇ ಕುಸಿದಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಕರ್ನಾಟಕ ಮಾತ್ರವಲ್ಲದೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಇಂದು ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಮಿಂಚು ಸಹಿತ ಚದುರಿದ ಮಳೆಯ ಮುನ್ಸೂಚನೆ ಇದೆ. ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಬಿಹಾರ, ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್‌, ಪಂಜಾಬ್, ದೆಹಲಿಯಲ್ಲಿ ಮಳೆಯಾಗಲಿದೆ.