Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ನವೆಂಬರ್ 29ರವರೆಗೆ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ನವೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ನವೆಂಬರ್ 29ರವರೆಗೆ ಮಳೆ
ಮಳೆ

Updated on: Nov 23, 2023 | 7:46 AM

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ನವೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಬೆಂಗಳೂರಿನಲ್ಲಿ ಬುಧವಾರ ಮಳೆಯಾಗಿದೆ.
ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ವಿಜಯಪುರದಲ್ಲಿ 15.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬುಧವಾರದಿಂದ ಮಳೆ ಶುರುವಾಗಿದೆ, ಗರುವಾರವೂ ಮೋಡಕವಿದ ವಾತಾವರಣ ಮುಂದುವರೆದಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರಿನಲ್ಲಿ ಇಂದಿನಿಂದ 2 ದಿನಗಳ ಕಾಲ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಎಚ್​ಎಎಲ್​ನಲ್ಲಿ 26.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us