AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮತ್ತೆ ಮಳೆಯ ಅಬ್ಬರ

Bengaluru Weather Today: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ, ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಇಂದಿನಿಂದ ವ್ಯಾಪಕ ಮಳೆಯಾಗಲಿದೆ.

Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮತ್ತೆ ಮಳೆಯ ಅಬ್ಬರ
ಮಳೆ
TV9 Web
| Updated By: ಸುಷ್ಮಾ ಚಕ್ರೆ|

Updated on:Nov 22, 2022 | 3:31 PM

Share

Bangalore Rains: ಬೆಂಗಳೂರು: ನವೆಂಬರ್ ತಿಂಗಳು ಮುಗಿಯುತ್ತಾ ಬಂದರೂ ಕರ್ನಾಟಕದಲ್ಲಿ (Rain in Karnataka) ಇನ್ನೂ ಮಳೆಯ ಅಬ್ಬರ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಕಳೆದೊಂದು ವಾರದಿಂದ ರಾಜ್ಯದಾದ್ಯಂತ ಚಳಿ ಹೆಚ್ಚಾಗಿತ್ತು. ಆದರೆ, ಇಂದಿನಿಂದ ಮತ್ತೆ ಮಳೆಯ ಆರ್ಭಟ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ (Bengaluru Rain) ಇಂದಿನಿಂದ (ನವೆಂಬರ್ 22) 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ನ. 24ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಬೆಂಗಳೂರು, ಕರಾವಳಿ ಸೇರಿ ಹಲವೆಡೆ ನಾಳೆಯಿಂದ ಭಾರೀ ಮಳೆ

ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ಬಳಿಕ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಸೋಮವಾರ ಕನಿಷ್ಠ 13.9 ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದಹಾಗೆ, ಈ ತಾಪಮಾನ ಕಳೆದ 1 ದಶಕದಲ್ಲಿ ನವೆಂಬರ್‌ನಲ್ಲಿ ದಾಖಲಾದ ಅತಿ ಕನಿಷ್ಟ ತಾಪಮಾನವಾಗಿದೆ. ನಿನ್ನೆ ಉದ್ಯಾನನಗರಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 13.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಕನಿಷ್ಠ ತಾಪಮಾನ 12.5 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದರೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ವ್ಯಾಪಕ ಮಳೆಯ ಮುನ್ಸೂಚನೆಯಿದೆ.

ಇದನ್ನೂ ಓದಿ: Bengaluru Weather: ಕರ್ನಾಟಕದಲ್ಲಿ ತಗ್ಗಿದ ಮಳೆಯ ಅಬ್ಬರ; ಬೆಂಗಳೂರಿನಲ್ಲಿ ಇಂದು ವಿಪರೀತ ಚಳಿ ಸಾಧ್ಯತೆ

ಈಗಾಗಲೇ ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗುವ ಬಗ್ಗೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದರ ಮಧ್ಯೆ ಈಗ ಮತ್ತೆ ಮಳೆಯ ಅಲರ್ಟ್ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಂಜು ಕೂಡ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಷಿಯಸ್, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಷಿಯಸ್ ಇರಲಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಆಂಧ್ರಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಚದುರಿದ ತುಂತುರು ಮತ್ತು ಗುಡುಗು ಸಹಿತ ಕೆಲವು ಭಾರಿ ಬೀಳುವ ಸಾಧ್ಯತೆಯಿದೆ. ತಮಿಳುನಾಡು, ಕರ್ನಾಟಕ, ಕೇರಳ, ತೆಲಂಗಾಣ ಮತ್ತು ಒಡಿಶಾದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:25 am, Tue, 22 November 22