Karnataka Weather: ಮೈಸೂರು, ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ

ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೀದರ್, ಕೊಡಗು ಹಾಗೂ ಮೈಸೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Karnataka Weather: ಮೈಸೂರು, ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ
ಮಳೆ
Image Credit source: The Hindu

Updated on: Mar 19, 2024 | 7:30 AM

ಮೈಸೂರು, ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್​ 23ರಿಮದ ಎರಡು ದಿನಗಳ ಕಾಲ ಮಳೆಯಾಗಲಿದೆ. ಬೀದರ್​ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಕೊಪ್ಪಳದಲ್ಲಿ ಮಾರ್ಚ್​ 21ರಿಂದ 2 ದಿನಗಳ ಕಾಲ ಮಳೆಯಾಗಲಿದೆ, ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಾರ್ಚ್​ 22ರಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ.

ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ 1 ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕನಹಳ್ಳಿಯಲ್ಲಿ 38.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯಲ್ಲಿ ಒಣಹವೆ ಇರಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಎಚ್​ಎಎಲ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಹೊನ್ನಾವರದಲ್ಲಿ 32.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 38.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಂತಾಮಣಿಯಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us