AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಜೂನ್ 18ರವರೆಗೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಭಾರಿ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜೂನ್ 18ರವರೆಗೆ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

Karnataka Rain: ಜೂನ್ 18ರವರೆಗೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಭಾರಿ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ
ಮಳೆImage Credit source: Treehugger
ನಯನಾ ರಾಜೀವ್
|

Updated on: Jun 14, 2023 | 7:32 AM

Share

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜೂನ್ 18ರವರೆಗೆ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರು ಎಚ್​ಎಎಲ್​, ಕಾರವಾರ, ಹೊಸಕೋಟೆ, ತಿಪಟೂರು, ಗೋಣಿಕೊಪ್ಪಲು, ಕೋಟ, ಹೊನ್ನಾವರ, ಮಾಲೂರು, ಅಂಕೋಲಾ, ಮಂಕಿ, ಬೆಳ್ತಂಗಡಿ, ಹುಣಸೂರು, ಕದ್ರಾ, ಬೇಲಿಕೇರಿ, ಪುತ್ತೂರು, ಕುಂದಾಪುರ, ಜ್ಞಾನಭಾರತಿ, ದೊಡ್ಡಬಳ್ಳಾಪುರ, ಟಿ ನರಸೀಪುರ, ಸರಗೂರು, ಭಾಗಮಂಡಲದಲ್ಲಿ ಮಳೆಯಾಗಿದೆ.

ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗಾಳಿಯು ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಲ್ಲಿ ಧಾರಾಕಾರ ಮಳೆ ಸಾಧ್ಯತೆ, ಹಳದಿ ಅಲರ್ಟ್​ ಘೋಷಣೆ

ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಡಲ ಕೊರೆತ ತಡೆಯಲು ಹಾಕಿದ್ದ ತಡೆಗೋಡೆ ಕೂಡ ಹಾಳಾಗಿದ್ದು, ಕರಾವಳಿ ಭಾಗದ ಜನರು ಆತಂಕಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತ ಈಗಾಗಲೇ ಕಡಲ್ಕೊರೆತ ತಡೆಯಲು ಕಲ್ಲುಗಳನ್ನು ಹಾಕುವ ಕೆಲಸ ಆರಂಭಿಸಿದೆ.

ಉತ್ತರ ಒಳನಾಡಿ ಜಿಲ್ಲೆಗಳಲ್ಲಿ ಕೂಡ ಅಲ್ಲಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಮಲೆನಾಡು ಭಾಗದಲ್ಲಿ ಕೂಡ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!