ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜೂನ್ 18ರವರೆಗೆ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರು ಎಚ್ಎಎಲ್, ಕಾರವಾರ, ಹೊಸಕೋಟೆ, ತಿಪಟೂರು, ಗೋಣಿಕೊಪ್ಪಲು, ಕೋಟ, ಹೊನ್ನಾವರ, ಮಾಲೂರು, ಅಂಕೋಲಾ, ಮಂಕಿ, ಬೆಳ್ತಂಗಡಿ, ಹುಣಸೂರು, ಕದ್ರಾ, ಬೇಲಿಕೇರಿ, ಪುತ್ತೂರು, ಕುಂದಾಪುರ, ಜ್ಞಾನಭಾರತಿ, ದೊಡ್ಡಬಳ್ಳಾಪುರ, ಟಿ ನರಸೀಪುರ, ಸರಗೂರು, ಭಾಗಮಂಡಲದಲ್ಲಿ ಮಳೆಯಾಗಿದೆ.
ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗಾಳಿಯು ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಲ್ಲಿ ಧಾರಾಕಾರ ಮಳೆ ಸಾಧ್ಯತೆ, ಹಳದಿ ಅಲರ್ಟ್ ಘೋಷಣೆ
ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಡಲ ಕೊರೆತ ತಡೆಯಲು ಹಾಕಿದ್ದ ತಡೆಗೋಡೆ ಕೂಡ ಹಾಳಾಗಿದ್ದು, ಕರಾವಳಿ ಭಾಗದ ಜನರು ಆತಂಕಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತ ಈಗಾಗಲೇ ಕಡಲ್ಕೊರೆತ ತಡೆಯಲು ಕಲ್ಲುಗಳನ್ನು ಹಾಕುವ ಕೆಲಸ ಆರಂಭಿಸಿದೆ.
ಉತ್ತರ ಒಳನಾಡಿ ಜಿಲ್ಲೆಗಳಲ್ಲಿ ಕೂಡ ಅಲ್ಲಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಮಲೆನಾಡು ಭಾಗದಲ್ಲಿ ಕೂಡ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ