Karnataka Rain: ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ
Bengaluru Rains: ಭಾರತದಲ್ಲಿ ಅಸಾನಿ ಚಂಡಮಾರುತದ ಅಬ್ಬರ ಕ್ಷೀಣಿಸಿದೆ. ಆದರೂ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಮಳೆ ಮುಂದುವರೆದಿದೆ. ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕೂಡ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು (Malnad Region) ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಇಂದು ಕೆಲವೆಡೆ ಚದುರಿದ ಮಳೆ ಮತ್ತು ಇನ್ನು ಕೆಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಇಂದಿನಿಂದ 3 ದಿನ ಬೆಂಗಳೂರು (Bengaluru Rain) ಸೇರಿದಂತೆ ಹಲವೆಡೆ ಮಳೆ ಮುಂದುವರೆಯುವ ನಿರೀಕ್ಷೆಯಿದೆ.
ಭಾರತದಲ್ಲಿ ಅಸಾನಿ ಚಂಡಮಾರುತದ ಅಬ್ಬರ ಕ್ಷೀಣಿಸಿದೆ. ಆದರೂ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಿಸಿಲು ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ.
ಕರ್ನಾಟಕದ ನಾನಾ ಭಾಗಗಳಲ್ಲಿ ಈಗಾಗಲೇ ಮಳೆ ಅಬ್ಬರ ಶುರುವಾಗಿದ್ದು, ಇಂದು ಕೂಡ ಮಳೆ ಮುಂದುವರೆಯುವ ನಿರೀಕ್ಷೆ ಇದೆ. ಈ ಬಗ್ಗೆ ರಾಜ್ಯ ನೈಸರ್ಗಿಕ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಗಳಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ನೈಸರ್ಗಿಕ ವಿಕೋಪ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕ ಮಾತ್ರವಲ್ಲದೆ ಇಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಕೇರಳ ಮತ್ತು ಲಕ್ಷದ್ವೀಪದಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಪ್ರತ್ಯೇಕ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಗೋವಾ, ಛತ್ತೀಸ್‌ಗಢ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ರಾಜಸ್ಥಾನದಲ್ಲಿ ತೀವ್ರ ಶಾಖದ ಪರಿಸ್ಥಿತಿ ಉಂಟಾಗಲಿದೆ. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ವಿದರ್ಭ, ದಕ್ಷಿಣ ಹರಿಯಾಣ, ದಕ್ಷಿಣ ಪಂಜಾಬ್ ಮತ್ತು ದೆಹಲಿಯಲ್ಲಿ ಬಿಸಿಗಾಳಿ ಪರಿಸ್ಥಿತಿಗಳು ಕಂಡುಬರುವ ಸಾಧ್ಯತೆಯಿದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ