Karnataka Rain: ಮೈಸೂರು, ಕೊಡಗು, ಚಾಮರಾಜನಗರದಲ್ಲಿ ಇಂದು ವರುಣನ ಆರ್ಭಟ; ಡಿ. 29ರವರೆಗೆ ಈ ಜಿಲ್ಲೆಗಳಲ್ಲಿ ಮಳೆ

| Updated By: ಸುಷ್ಮಾ ಚಕ್ರೆ

Updated on: Dec 27, 2022 | 6:17 AM

Bengaluru Weather Today: ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಇನ್ನೂ 3 ದಿನ ತುಂತುರು ಮಳೆಯಾಗಲಿದೆ.

Karnataka Rain: ಮೈಸೂರು, ಕೊಡಗು, ಚಾಮರಾಜನಗರದಲ್ಲಿ ಇಂದು ವರುಣನ ಆರ್ಭಟ; ಡಿ. 29ರವರೆಗೆ ಈ ಜಿಲ್ಲೆಗಳಲ್ಲಿ ಮಳೆ
ಮಳೆ
Follow us on

Bangalore Rains: ಬೆಂಗಳೂರು (Bengaluru Weather) ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಸಿಂಚನವಾಗುತ್ತಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಕರ್ನಾಟಕದ (Karnataka Rain) ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇಂದು (ಡಿ. 27) ಮತ್ತು ಡಿ. 28ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಇನ್ನೂ 3 ದಿನ ತುಂತುರು ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather Today: ಬೆಂಗಳೂರು ಸೇರಿ ಕರ್ನಾಟಕದ 9 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮತ್ತೆ ಮಳೆ

ಮುಂದಿನ 3 ದಿನ ಎಂದರೆ ಡಿಸೆಂಬರ್‌ 29ರವರೆಗೆ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ. ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಕರ್ನಾಟಕ ಮಾತ್ರವಲ್ಲದೆ ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗಬಹುದು. ಕೇರಳ ಮತ್ತು ಮಾಹೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ. ಕರಾವಳಿ ಒಡಿಶಾದಲ್ಲಿ ಮುಂಜಾನೆ ಮಂಜು ಕವಿಯಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಶೀತ ಅಲೆಯ ಪರಿಸ್ಥಿತಿಗಳು ಇರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ