Karnataka Rain: ಬೆಂಗಳೂರು, ಮೈಸೂರು, ಕರಾವಳಿ, ಮಲೆನಾಡಿನಲ್ಲಿ ನ. 12ರವರೆಗೂ ವ್ಯಾಪಕ ಮಳೆ; ತಮಿಳುನಾಡಿಗೆ ರೆಡ್ ಅಲರ್ಟ್​

| Updated By: ಆಯೇಷಾ ಬಾನು

Updated on: Nov 10, 2021 | 6:46 AM

Karnataka Weather Today: ಇಂದು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ತುಂತುರು ಇಲ್ಲವೇ ಹಗುರ ಮಳೆ ಆಗಲಿದೆ. ನಂತರ ಹಿಂಗಾರು ತುಸು ಚುರುಕಾಗಲಿದ್ದು, ನ. 11ರಂದು ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ. ಬೆಂಗಳೂರು ನಗರ ಜಿಲ್ಲೆಗೆ ಇಂದು ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ.

Karnataka Rain: ಬೆಂಗಳೂರು, ಮೈಸೂರು, ಕರಾವಳಿ, ಮಲೆನಾಡಿನಲ್ಲಿ ನ. 12ರವರೆಗೂ ವ್ಯಾಪಕ ಮಳೆ; ತಮಿಳುನಾಡಿಗೆ ರೆಡ್ ಅಲರ್ಟ್​
ತಮಿಳುನಾಡಿನಲ್ಲಿ ಮಳೆ
Follow us on

Bangalore Rain: ಬೆಂಗಳೂರು, ಬಳ್ಳಾರಿ, ದಾವಣಗೆರೆ, ಮೈಸೂರು, ಮಲೆನಾಡು ಸೇರಿದಂತೆ ಕರ್ನಾಟಕದ 13 ಜಿಲ್ಲೆಗಳಲ್ಲಿ ಇಂದು ಮಳೆ (Heavy Rain) ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಭಾರೀ ಮಳೆಯಾಗುವುದರಿಂದ ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ (Bengaluru Rain) ಕಳೆದ ಕೆಲವು ದಿನಗಳಿಂದ ಆಗಾಗ ಸುರಿದ ಮಳೆ ನ. 12ರವರೆಗೆ ಮುಂದುವರಿಯಲಿದೆ. ಇಂದು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ತುಂತುರು ಇಲ್ಲವೇ ಹಗುರ ಮಳೆ ಆಗಲಿದೆ. ನಂತರ ಹಿಂಗಾರು ತುಸು ಚುರುಕಾಗಲಿದ್ದು, ನ. 11ರಂದು ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ. ಬೆಂಗಳೂರು ನಗರ ಜಿಲ್ಲೆಗೆ ಇಂದು ‘ಯೆಲ್ಲೋ ಅಲರ್ಟ್‌’  (Yellow Alert) ನೀಡಲಾಗಿದೆ.

ಇಂದು ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಭಾರೀ ಮಳೆಯಿಂದ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ನವೆಂಬರ್ 11ರಂದು ತಮಿಳುನಾಡನ್ನು ಸುಳಿಗಾಳಿ ಪ್ರವೇಶಿಸುವ ಸಾಧ್ಯತೆಯಿದೆ. ಇಂದು ಮತ್ತು ನವೆಂಬರ್ 11ರಂದು ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳನ್ನು ಹೊರತುಪಡಿಸಿ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಳದಿ ಅಲರ್ಟ್ ಘೋಷಿಸಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಉತ್ತರ ಒಳಭಾಗದ ಹಾವೇರಿ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ವ್ಯಾಪಕ ಸಾಧಾರಣ ಮಳೆಯ ಸಾಧ್ಯತೆಯಿದ್ದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡು ಮತ್ತು ಪುದುಚೇರಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಿದೆ. ಗುರುವಾರದಿಂದ ಒಡಿಶಾ, ಛತ್ತೀಸ್‌ಗಢ, ತೆಲಂಗಾಣ ಮತ್ತು ಪಕ್ಕದ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸರಾಸರಿಗಿಂತ ಹೆಚ್ಚಾಗಿರುತ್ತದೆ. ತಮಿಳುನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳನಾಡು ಮತ್ತು ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಕರಾವಳಿ ಕರ್ನಾಟಕ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಕಷ್ಟು ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ಲಕ್ಷದ್ವೀಪದಲ್ಲಿ ಅಲ್ಲಲ್ಲಿ ತುಂತುರು ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇಂದಿನಿಂದ ನೈಋತ್ಯ ಮುಂಗಾರು ಬಂಗಾಳಕೊಲ್ಲಿಯಿಂದ ಹಾದು ಗುರುವಾರ ಅಥವಾ ಶುಕ್ರವಾರ ತಮಿಳುನಾಡಿನ ಕರಾವಳಿಯನ್ನು ಸಮೀಪಿಸುವ ಸಾಧ್ಯತೆ ಇದೆ. ಇಂದು ಮತ್ತು ಗುರುವಾರ ಅತ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಬೀಳುತ್ತದೆ. ಇನ್ನೆರಡು ದಿನ ಆಂಧ್ರ ಪ್ರದೇಶದ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಗುರುವಾರ ಕೇರಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಪೂರ್ವ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ನಗರದಲ್ಲಿ ನ. 12ರವರೆಗೆ ಸಾಧಾರಣದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇನ್ನೆರಡು ದಿನಗಳ ಕಾಲ ತಮಿಳುನಾಡಿನ ಹಲವೆಡೆ ರೆಡ್ ಅಲರ್ಟ್ ಘೋಷಿಸಿದೆ. ತಮಿಳುನಾಡಿನ 14 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 11ರವರೆಗೂ ತಮಿಳುನಾಡಿನಲ್ಲಿ ವಿಪರೀತ ಮಳೆಯಾಗಲಿದೆ. ಶುಕ್ರವಾರದವರೆಗೂ ಮಳೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ವಾಯುಭಾರ ಕುಸಿತದಿಂದಾಗಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಈ ವಾಯುಭಾರ ಕುಸಿತ ತಮಿಳುನಾಡಿನ ಕರಾವಳಿಯತ್ತ ಸಾಗಲಿದ್ದು, ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Chennai Rain ತಮಿಳುನಾಡಿನಲ್ಲಿ ಭಾರೀ ಮಳೆಯಿಂದಾಗಿ 5 ಸಾವು; ನವೆಂಬರ್ 11ರವರೆಗೆ ರೆಡ್ ಅಲರ್ಟ್ ಘೋಷಣೆ 

Chennai Rain: ಕುಂಭದ್ರೋಣ ಮಳೆಗೆ ತತ್ತರಿಸಿದ ಚೆನ್ನೈ; ಇಡೀ ನಗರ ಜಲಾವೃತ, ಐಎಂಡಿಯಿಂದ ರೆಡ್​ ಅಲರ್ಟ್​ ಘೋಷಣೆ