ಬೆಂಗಳೂರು: ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಮಾತ್ರವಲ್ಲದೆ ಇತರೆ ಜಿಲ್ಲೆಗಳಲ್ಲೂ ಮಳೆ ಮುಂದುವರೆದಿದೆ. ಕರ್ನಾಟಕದ (Karnataka Rains) ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ನಂತರ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ಮಾತ್ರವಲ್ಲದೆ ಉತ್ತರ ಒಳನಾಡು, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗಲಿದೆ. ಹಾಗೇ, ಇಂದಿನಿಂದ ಅಸಾನಿ ಚಂಡಮಾರುತದ (Cyclone Asani) ಅಬ್ಬರ ಹೆಚ್ಚಾಗಲಿದ್ದು, ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಇಂದು ಒಡಿಶಾದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಕೂಡ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ 3 ದಿನ ಕರ್ನಾಟಕದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮೇ 12ರವರೆಗೆ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇನ್ನೂ 3 ದಿನ ಮಳೆ ಸುರಿಯುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಮೇ 11, 12ರಂದು ಮಳೆಯಾಗುವ ನಿರೀಕ್ಷೆಯಿದೆ ಎಂದು ಟಿವಿ9ಗೆ ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು ಮಾತ್ರವಲ್ಲದೆ ಮಲೆನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಮೇ 12ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುತ್ತಿದೆ. ಕರ್ನಾಟಕದ ನಾನಾ ಭಾಗಗಳಲ್ಲಿ ಈಗಾಗಲೇ ಮಳೆ ಅಬ್ಬರ ಶುರುವಾಗಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ನೈಸರ್ಗಿಕ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಗಳಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ನೈಸರ್ಗಿಕ ವಿಕೋಪ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದ್ದು, ಸುಮಾರು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 15 ರಿಂದ 65 ಮಿ.ಮೀ ಮಳೆಯ ಬಗ್ಗೆ ಮುನ್ಸೂಚನೆ ನೀಡಲಾಗಿದೆ.
ಇಂದಿನಿಂದ ಅಸಾನಿ ಚಂಡಮಾರುತ:
ಒಡಿಶಾ, ಆಂಧ್ರಪ್ರದೇಶ ಮತ್ತು ಬಂಗಾಳದಲ್ಲಿ ಅಸಾನಿ ಚಂಡಮಾರುತದ ತೀವ್ರತೆ ಹೆಚ್ಚಾಗುತ್ತಿದೆ. ಅಸಾನಿ ಚಂಡಮಾರುತವು ತನ್ನ ದಾರಿಯಲ್ಲಿ ಸಾಗುತ್ತಿರುವುದರಿಂದ ಈ ವಾರ ಮೂರು ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯ ಮುನ್ಸೂಚನೆ ನೀಡಲಾಗಿದೆ. ಇಂದು ಸಂಜೆಯಿಂದ ಭಾರೀ ಮಳೆ ಪ್ರಾರಂಭವಾಗುತ್ತದೆ ಮತ್ತು ಒಡಿಶಾದ ಮೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಮೇ 11ರಂದು 5 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅಸಾನಿ ಚಂಡಮಾರುತವು ಮುಂದಿನ 12 ಗಂಟೆಗಳಲ್ಲಿ ‘ತೀವ್ರ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ’ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇಂದು ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 85 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಇಂದು ಗಂಟೆಗೆ 100 ಕಿಮೀ ವೇಗದಲ್ಲಿ ಬೀಸುವ ಗಾಳಿಯ ವೇಗವು ಪಶ್ಚಿಮ ಕೇಂದ್ರ ಮತ್ತು ಪಕ್ಕದ ವಾಯುವ್ಯ ಮತ್ತು ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 3 ದಿನಗಳಲ್ಲಿ ಸಮುದ್ರದ ಪರಿಸ್ಥಿತಿಯು ಪ್ರಕ್ಷುಬ್ಧವಾಗಿರುತ್ತದೆ ಎಂದು IMD ಹವಾಮಾನ ಮುನ್ಸೂಚನಾ ಸಂಸ್ಥೆ ಎಚ್ಚರಿಸಿದೆ.
ಇಂದು ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 85 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಮುಂದಿನ 3 ದಿನಗಳಲ್ಲಿ ಸಮುದ್ರದ ಪರಿಸ್ಥಿತಿಯು ಪ್ರಕ್ಷುಬ್ಧವಾಗಿರುತ್ತದೆ ಎಂದು IMD ಹವಾಮಾನ ಮುನ್ಸೂಚನಾ ಸಂಸ್ಥೆ ಎಚ್ಚರಿಸಿದೆ. ಇಂದು ತೀವ್ರ ಅಸಾನಿ ಚಂಡಮಾರುತವು ಕರಾವಳಿಯಿಂದ ಸಮುದ್ರದ ಮೇಲೆ ಮರುಕಳಿಸುವ ಸಾಧ್ಯತೆಯಿದೆ. ಈ ಚಂಡಮಾರುತ ಆಂಧ್ರಪ್ರದೇಶ, ಒಡಿಶಾ ಅಥವಾ ಪಶ್ಚಿಮ ಬಂಗಾಳವನ್ನು ದಾಟುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಿರಿಯ ವಿಜ್ಞಾನಿ ಆರ್‌ಕೆ ಜೆನಮಣಿ ಹೇಳಿದ್ದಾರೆ.
ಅಸಾನಿ ಚಂಡಮಾರುತದ ಪ್ರಭಾವದಿಂದ ಒಡಿಶಾದ ಕೆಲವು ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಗಂಟೆಗೆ 120 ಕಿಮೀ ವೇಗದಲ್ಲಿ ಬೀಸುವ ಚಂಡಮಾರುತವು ವಿಶಾಖಪಟ್ಟಣಂನ ಆಗ್ನೇಯಕ್ಕೆ 550 ಕಿಮೀ ಮತ್ತು ಪುರಿಯ ಆಗ್ನೇಯಕ್ಕೆ 680 ಕಿಮೀ ಕೇಂದ್ರೀಕೃತವಾಗಿದೆ. ಇಂದು ಪಶ್ಚಿಮ ಬಂಗಾಳದ ಹೌರಾ, ಕೋಲ್ಕತ್ತಾ, ಹೂಗ್ಲಿ ಮತ್ತು ಪಶ್ಚಿಮ ಮಿಡ್ನಾಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ