Karnataka Rains: ಚಂಡಮಾರುತ ಪ್ರಭಾವ: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನಗಳ ಕಾಲ ಮಳೆ
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಧಾನವಾಗಿ ಮೋಚಾ ಚಂಡಮಾರುತ ರೂಪುಗೊಳ್ಳುತ್ತಿದೆ. ಮೇ 8ರಂದು ಪ್ರಾರಂಭವಾಗಲಿದ್ದು, ಮೇ 9ರ ನಂತರ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಮೇ 9ರ ವೇಳೆಗೆ ಮೋಚಾ ಚಂಡಮಾರುತ ತೀವ್ರ ರೂಪ ಪಡೆಯಲಿದೆ. ಭಾನುವಾರದ ಬಳಿಕಗಾಳಿಯು ಗಂಟೆಗೆ 540-50 ಕಿ.ಮೀ ವೇಗದಲ್ಲಿ ಬೀಸಲಿದೆ.
ಒಡಿಶಾ ಕರಾವಳಿ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮೀನುಗಾರಿಕೆಯಲ್ಲಿ ತೊಡಗದಂತೆ ಮೀನುಗಾರರಿಗೆ ಎಚ್ಚರಿಕೆ ರವಾನಿಸಲಾಗಿದೆ. ಮೇ8 ರಿಂದ 12ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೀದರ್, ನಿರ್ಣಾ, ಹುಮನಾಬಾದ್, ನಿಂಬರ್ಗಾ ತಾಂಡಾ, ಕೋಲಾರ, ಕಮಲಾಪುರ, ಹಲಬರ್ಗಾ, ತಿಪಟೂರು, ಮಿಡಿಗೇಶಿ, ಕಾಟಿಕೆರೆ, ಹೊಳೆ ಹೊನ್ನೂರು, ಶ್ರೀರಂಗಪಟ್ಟಣದಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು, ತುಮಕೂರು, ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವೆಡೆ ಭಾರಿ ಮಳೆ
ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ,ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಬಾಗಲಕೋಟೆ, ಬೀದರ್, ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕಲಬುರಗಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ