Bangalore Rains: ಮಾಂಡೌಸ್ ಚಂಡಮಾರುತದ (Cyclone Mandous) ಪ್ರಭಾವದಿಂದ ಕರ್ನಾಟಕದಲ್ಲಿ (Karnataka Rains) ಕಳೆದ ಮೂರ್ನಾಲ್ಕು ದಿನಗಳಿಂದ ಅಕಾಲಿಕ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ (Bengaluru Weather) ಮೂರು ದಿನಗಳಿಂದ ತುಂತುರು ಮಳೆ ಸುರಿಯುತ್ತಲೇ ಇದೆ. ಇಂದು ಕೂಡ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರಿಯಲಿದೆ. ಹವಾಮಾನ ಇಲಾಖೆಯ (IMD) ಮಾಹಿತಿ ಪ್ರಕಾರ, ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ ಹಾಗೂ ಕರಾವಳಿಯಲ್ಲಿ ಡಿ. 16ರವರೆಗೂ ಮಳೆಯಾಗಲಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಡಿಸೆಂಬರ್ 16 ರವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಾಂಡೌಸ್ ಚಂಡಮಾರುತ ದುರ್ಬಲವಾಗಿದ್ದರೂ ಚಾಮರಾಜನಗರ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ IMD ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಯಾವುದೇ ಹಾನಿಯಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಇದನ್ನೂ ಓದಿ: Bengaluru Rain: ಮಾಂಡೌಸ್ ಚಂಡಮಾರುತದ ಎಫೆಕ್ಟ್; ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ, ಮೈ ಕೊರೆವ ಚಳಿ
ಹಾಗೇ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಗದಗ ಮತ್ತು ಬಳ್ಳಾರಿಯಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇದರ ಜೊತೆಗೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
(i) Rainfall warning: Heavy rainfall at isolated places very likely over Tamil Nadu, South Interior Karnataka & south Coastal Andhra Pradesh today and over Kerala & Mahe during 11th-13th December, 2022 and decrease in rainfall activity over the region thereafter. pic.twitter.com/90WZCO9Hai
— India Meteorological Department (@Indiametdept) December 11, 2022
ಮಾಂಡೌಸ್ ಚಂಡಮಾರುತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿದ ಮಳೆ ಸುರಿಯುತ್ತಲೇ ಇದೆ. ನಿನ್ನೆ (ಡಿಸೆಂಬರ್ 12) ಚಾಮರಾಜನಗರದಲ್ಲಿ 69 ಮಿಲಿ ಮೀಟರ್, ಶಿವಮೊಗ್ಗದಲ್ಲಿ 57.5 ಮಿಲಿ ಮೀಟರ್, ಚಿಕ್ಕಮಗಳೂರಿನಲ್ಲಿ 53 ಮಿಲಿ ಮೀಟರ್, ತುಮಕೂರು- 48.5 ಮಿಲಿ ಮೀಟರ್, ಮಂಡ್ಯ – 46 ಮಿಲಿ ಮೀಟರ್, ಮೈಸೂರು- 44.5 ಮಿಲಿ ಮೀಟರ್, ದಾವಣಗೆರೆ- 42.5 ಮಿಲಿ ಮೀಟರ್, ಹಾಸನ- 39ಮಿಲಿ ಮೀಟರ್, ಕೋಲಾರ- 33 ಮಿಲಿ ಮೀಟರ್, ಬಳ್ಳಾರಿ- 31 ಮಿಲಿ ಮೀಟರ್ ಹಾಗೂ ಬೆಂಗಳೂರು ನಗರದಲ್ಲಿ 31 ಮಿಲಿ ಮೀಟರ್ ಮಳೆ ಆಗಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಲಕ್ಷದ್ವೀಪ, ಕೇರಳ ಮತ್ತು ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಲಡಾಖ್, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ತಮಿಳುನಾಡಿನ ವಾಲಾಜಾಬಾದ್, ಕಾಂಚೀಪುರಂ, ತಿರುಪೋರುರ್ ಮತ್ತು ವಂಡಲೂರ್‌ನಂತಹ ಚೆನ್ನೈ ಸುತ್ತಮುತ್ತಲಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯ ಎಚ್ಚರಿಕೆ ನೀಡಲಾಗಿದೆ. ಮಾಂಡೌಸ್ ಚಂಡಮಾರುತದ ಬೆನ್ನಲ್ಲೇ ಡಿಸೆಂಬರ್ 13ರಂದು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆ ಹೊರಹೊಮ್ಮುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ನಲ್ಲಿ ಡಿಸೆಂಬರ್ 14 ಮತ್ತು 15ರಂದು ಭಾರೀ ಮಳೆಯಾಗಲಿದೆ.