AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆ; 15 ಜಿಲ್ಲೆಗಳಿಗೆ ಹಳದಿ ಅಲರ್ಟ್​

Cyclone Mandous: ಮಾಂಡೌಸ್ ಚಂಡಮಾರುತದಿಂದಾಗಿ ಡಿ. 13ರವರೆಗೂ ರಾಜ್ಯದಲ್ಲಿ ಮಳೆ ಆರ್ಭಟಿಸಲಿದ್ದು, ಇಂದು ಕರ್ನಾಟಕದ 15 ಜಿಲ್ಲೆಗಳಿಗೆ 'ಹಳದಿ ಅಲರ್ಟ್' ಘೊಷಿಸಲಾಗಿದೆ.

Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆ; 15 ಜಿಲ್ಲೆಗಳಿಗೆ ಹಳದಿ ಅಲರ್ಟ್​
ಮಳೆ
TV9 Web
| Edited By: |

Updated on: Dec 10, 2022 | 6:07 AM

Share

Bengaluru Rains: ಮಾಂಡೌಸ್ ಚಂಡಮಾರುತದಿಂದ (Cyclone Mandous) ನೆರೆಯ ರಾಜ್ಯಗಳಾದ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಕರ್ನಾಟಕದ (Karnataka Rains) ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ. ಮಾಂಡೌಸ್ ಚಂಡಮಾರುತದಿಂದಾಗಿ ಡಿ. 13ರವರೆಗೂ ರಾಜ್ಯದಲ್ಲಿ ಮಳೆ ಆರ್ಭಟಿಸಲಿದ್ದು, ಇಂದು ಕರ್ನಾಟಕದ 15 ಜಿಲ್ಲೆಗಳಿಗೆ ‘ಹಳದಿ ಅಲರ್ಟ್’ (Yellow Alert) ಘೊಷಿಸಲಾಗಿದೆ.

ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಕರ್ನಾಟಕದ ಮೇಲೆ ಅದರಲ್ಲೂ ಪ್ರಮುಖವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇಲೆ ‘ಮಾಂಡೌಸ್’ ಪ್ರಭಾವ ಹೆಚ್ಚಾಗಿರಲಿದೆ. ಒಟ್ಟು ಮುಂದಿನ ಮೂರು ದಿನಗಳ ಪೈಕಿ ಡಿಸೆಂಬರ್ 11 ಮತ್ತು 12ರಂದು ಗುಡುಗು ಸಹಿತ ಧಾರಾಕಾರವಾಗಿ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain: ಬೆಂಗಳೂರು, ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಗುಡುಗು ಸಹಿತ ಮಳೆ

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಸೇರಿ ಒಟ್ಟು 15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆಯಾಗಲಿದೆ. ಡಿಸೆಂಬರ್ 13ರವರೆಗೂ ಭಾರೀ ಮಳೆ ಮುಂದುವರಿಯಲಿದ್ದು, ಚಂಡಮಾರುತದ ಪ್ರಭಾವದಿಂದಾಗಿ ಗಾಳಿಯೂ ಬೀಸಲಿದೆ. ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರದಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ. ಭಾನುವಾರ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಮಳೆಯಾಗಲಿದೆ. ಡಿಸೆಂಬರ್ 12ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗಲಿದೆ.

ಇದನ್ನೂ ಓದಿ: Cyclone Mandous: ಮಾಂಡೌಸ್​ ಚಂಡಮಾರುತದ ಪರಿಣಾಮ; ಡಿ. 13ರವರೆಗೆ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಮಾಂಡೌಸ್ ಚಂಡಮಾರುತದ ಹಿನ್ನೆಲೆಯಲ್ಲಿ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ‘ಹಳದಿ’ ಅಲರ್ಟ್ ಘೋಷಿಸಲಾಗಿದೆ. ಇಂದು ಆಂಧ್ರಪ್ರದೇಶದ ಕರಾವಳಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಪ್ರದೇಶದಲ್ಲಿ ಇಂದು ಮುಂಜಾನೆ ಮಂಜು ಬೀಳುವ ಸಾಧ್ಯತೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ