AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮಳೆ ಸಂಬಂಧಿ ಅವಘಡದಿಂದ ಸತ್ತವರ ಸಂಖ್ಯೆ ಈ ವರ್ಷ ಕಡಿಮೆ! ಸಿಡಿಲು ಬಡಿದು ಮೃತಪಟ್ಟವರ ಸಂಖ್ಯೆಯೇ ಹೆಚ್ಚು

ಕರ್ನಾಟಕದಲ್ಲಿ ಮಳೆ ಸಂಬಂಧಿ ಅವಘಡಗಳಿಂದ ಮೃತಪಟ್ಟವರ ಸಂಖ್ಯೆ ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ತುಸು ಕಡಿಮೆ ಇದೆ. ಈ ಮುಂಗಾರು ಅವಧಿಯಲ್ಲಿ 70 ಮಂದಿ ಮೃತಪಟ್ಟಿದ್ದು, ಸಿಡಿಲು ಬಡಿದು 36 ಮಂದಿ ಸಾವನ್ನಪ್ಪಿದ್ದಾರೆ. 2011ರಿಂದ 2026ರವರೆಗೆ ರಾಜ್ಯದಲ್ಲಿ ಸಿಡಿಲಿಗೆ 1,190 ಮಂದಿ ಬಲಿಯಾಗಿದ್ದಾರೆ.

ಕರ್ನಾಟಕದಲ್ಲಿ ಮಳೆ ಸಂಬಂಧಿ ಅವಘಡದಿಂದ ಸತ್ತವರ ಸಂಖ್ಯೆ ಈ ವರ್ಷ ಕಡಿಮೆ! ಸಿಡಿಲು ಬಡಿದು ಮೃತಪಟ್ಟವರ ಸಂಖ್ಯೆಯೇ ಹೆಚ್ಚು
ಮಳೆ ಹಾಗೂ ಪ್ರವಾಹ (ಸಾಂದರ್ಭಿಕ ಚಿತ್ರ)Image Credit source: PTI
ಗಣಪತಿ ಶರ್ಮಾ
|

Updated on: Sep 28, 2026 | 9:29 AM

Share

ಮುಖ್ಯಾಂಶಗಳು

  • ಈ ವರ್ಷ ಸಿಡಿಲು ಬಡಿದು 36 ಮಂದಿ ಸಾವು
  • ಮನೆ ಗೋಡೆ ಕುಸಿದು 17 ಮಂದಿ ಸಾವು
  • ಸಿಡಿಲಾಘಾತ ತಡೆಗೆ 11 ಕಡೆ ಸಿಡಿಲು ಪತ್ತೆ ಕೇಂದ್ರಗಳ ಸ್ಥಾಪನೆ

ಬೆಂಗಳೂರು, ಸೆಪ್ಟೆಂಬರ್ 28: ರಾಜ್ಯದಲ್ಲಿ ಈ ವರ್ಷ ಮಳೆ ಸಂಬಂಧಿ ಅವಘಡಗಳಿಂದ 70 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಸಿಡಿಲು ಬಡಿದು ಮೃತಪಟ್ಟವರ ಸಂಖ್ಯೆಯೇ ಶೇ 50ಕ್ಕಿಂತ ಹೆಚ್ಚಿದೆ ಎಂದು ವರದಿಯಾಗಿದೆ. ಮಳೆ ಕೊರತೆಯ ಕಾರಣ ಕಳೆದ ಐದು ವರ್ಷಗಳಲ್ಲೇ ಈ ಮುಂಗಾರಿನಲ್ಲಿ ಪ್ರಕೃತಿ ವಿಕೋಪದಿಂದ ಸಂಭವಿಸಿದ ಸಾವುಗಳ ಸಂಖ್ಯೆ ಕಡಿಮೆಯಾಗಿದೆ. 2025-26ರಲ್ಲಿ ಮಳೆ ಸಂಬಂಧಿ ಅವಘಡಗಳಿಂದ 147 ಮಂದಿ ಮೃತಪಟ್ಟಿದ್ದರು. ಈ ಪೈಕಿ 64 ಮಂದಿ ಸಿಡಿಲು ಬಡಿದು ಮೃತಪಟ್ಟಿದ್ದರು. ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಅಂಕಿ-ಅಂಶಗಳ ಪ್ರಕಾರ, ಈ ವರ್ಷ ಸಿಡಿಲು ಬಡಿದು 36 ಮಂದಿ ಮೃತಪಟ್ಟಿದ್ದಾರೆ. ಮನೆ ಅಥವಾ ಗೋಡೆ ಕುಸಿದು 17 ಮಂದಿ, ಭಾರಿ ಮಳೆ, ಪ್ರವಾಹ ಹಾಗೂ ಬಿರುಗಾಳಿಗೆ ಮರಗಳು ಉರುಳಿ 11 ಮಂದಿ ಮೃತಪಟ್ಟಿದ್ದಾರೆ. ಭೂಕುಸಿತದಿಂದ ಮೂವರು ಹಾಗೂ ಜಲಮೂಲಗಳಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ.

ಮಳೆ ಸಂಬಂಧಿ ಅವಘಡಗಳಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು ರೈತರು

2022-23ರಿಂದ ಈವರೆಗೆ ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಿಂದ 779 ಮಂದಿ ಮೃತಪಟ್ಟಿದ್ದಾರೆ. ಇವರ ಪೈಕಿ 340 ಮಂದಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಅಂಕಿ-ಅಂಶಗಳ ಪ್ರಕಾರ, 2011ರಿಂದ 2026ರವರೆಗೆ ರಾಜ್ಯದಲ್ಲಿ ಸಿಡಿಲು ಬಡಿದು 1,190 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತರಾಗಿದ್ದಾರೆ.

ಸಿಡಿಲಿನಿಂದ ಹೆಚ್ಚು ಮಂದಿ ಮೃತಪಟ್ಟವರಲ್ಲಿ ಬೆಳಗಾವಿ ಟಾಪ್

ಕಳೆದ 15 ವರ್ಷಗಳ ಅಂಕಿ-ಅಂಶದಲ್ಲಿ ಸಿಡಿಲು ಸಂಬಂಧಿ ಸಾವುಗಳಲ್ಲಿ ಬೆಳಗಾವಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ನಂತರ ಕಲಬುರಗಿ, ವಿಜಯಪುರ, ಬೀದರ್, ಹಾಸನ, ಕೊಪ್ಪಳ, ಹಾವೇರಿ, ಯಾದಗಿರಿ, ತುಮಕೂರು, ಗದಗ ಹಾಗೂ ರಾಯಚೂರು ಜಿಲ್ಲೆಗಳಿವೆ.

ಸಿಡಿಲು ಆಘಾತ ಹೆಚ್ಚಲು ಕಾರಣವೇನು?

ಭಾರತೀಯ ಉಷ್ಣವಲಯ ಹವಾಮಾನ ಸಂಸ್ಥೆ (IITM), ಭೂ ವಿಜ್ಞಾನ ಸಚಿವಾಲಯ (MoES), ರಾಷ್ಟ್ರೀಯ ದೂರ ಸಂವೇದಿ ಕೇಂದ್ರ (NRSC) ಹಾಗೂ ಇಸ್ರೋ ಅಧ್ಯಯನಗಳ ಪ್ರಕಾರ, 2019ರಿಂದ 2023ರವರೆಗೆ ಕ್ಲೌಡ್-ಟು-ಗ್ರೌಂಡ್ (CG) ಸಿಡಿಲಿನ ಘಟನೆಗಳಲ್ಲಿ ಶೇ 53ರಷ್ಟು ಏರಿಕೆಯಾಗಿದೆ. ಜಾಗತಿಕ ತಾಪಮಾನ ಏರಿಕೆ, ಜಲಮೂಲಗಳ ಕ್ಷೀಣತೆ, ಅರಣ್ಯ ನಾಶ, ಮಾಲಿನ್ಯ ಹಾಗೂ ಪರಿಸರದ ಹಾನಿ ಸಿಡಿಲಿನ ಘಟನೆಗಳ ಹೆಚ್ಚಳಕ್ಕೆ ಕಾರಣವಾಗುತ್ತಿವೆ ಎಂದು ಅಧ್ಯಯನ ಹೇಳಿದೆ.

ಕರ್ನಾಟಕದಾದ್ಯಂತ 11 ಸಿಡಿಲು ಪತ್ತೆ ಸಂವೇದಕ ಕೇಂದ್ರ ಸ್ಥಾಪನೆ

ಸಿಡಿಲಿನಿಂದ ಸಂಭವಿಸುವ ಸಾವುಗಳನ್ನು ಕಡಿಮೆ ಮಾಡಲು ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ 11 ಸಿಡಿಲು ಪತ್ತೆ ಸಂವೇದಕ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸಿಡಿಲಿನ ಸಾಧ್ಯತೆಯನ್ನು ಪತ್ತೆಹಚ್ಚಿ ಸುಮಾರು 45 ನಿಮಿಷ ಮುಂಚಿತವಾಗಿ ಎಚ್ಚರಿಕೆ ನೀಡಲಾಗುತ್ತಿದೆ.

ಸಿಡಿಲು ಆ್ಯಪ್ ಮೂಲಕ ಸಿಡಿಲಿನ ಮುನ್ನೆಚ್ಚರಿಕೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಅಭಿವೃದ್ಧಿಪಡಿಸಿರುವ ‘ಸಿಡಿಲು’ ಆ್ಯಪ್ ಮೂಲಕವೂ ಸ್ಥಳ ನಿರ್ದಿಷ್ಟ ಸಿಡಿಲಿನ ಮುನ್ನೆಚ್ಚರಿಕೆಗಳನ್ನು ನೀಡಲಾಗುತ್ತಿದೆ. ಈ ಎಚ್ಚರಿಕೆಗಳನ್ನು ಎಸ್‌ಎಂಎಸ್ ಮೂಲಕವೂ ಜನರಿಗೆ ಕಳುಹಿಸಲಾಗುತ್ತಿದೆ. ಮುನ್ನೆಚ್ಚರಿಕಾ ವ್ಯವಸ್ಥೆ ಅಳವಡಿಸಿದ ಬಳಿಕ ರಾಜ್ಯದಲ್ಲಿ ಸಿಡಿಲಿನಿಂದ ಸಂಭವಿಸುವ ಸಾವುಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತೆ ಹೊನ್ನಾಂಬ ಎಸ್. ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಆದರೆ, ಸಿಡಿಲಿನಿಂದಾಗುವ ಬಹುತೇಕ ಸಾವುಗಳು ಕೃಷಿ ಜಮೀನುಗಳಲ್ಲೇ ಸಂಭವಿಸುತ್ತಿವೆ. ಜಮೀನುಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇರುವುದರಿಂದ ಅಥವಾ ರೈತರು ಮೊಬೈಲ್‌ಗಳನ್ನು ತಮ್ಮೊಂದಿಗೆ ಕೊಂಡೊಯ್ಯದಿರುವುದರಿಂದ ಎಚ್ಚರಿಕೆ ತಲುಪದಿರುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿರುವುದನ್ನೂ ವರದಿ ಉಲ್ಲೇಖಿಸಿದೆ.

LIVE TV

ಕಳೆದ ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಸಿಡಿಲು ಬಡಿದು ಆರು ಮಂದಿ ಮೃತಪಟ್ಟಿದ್ದು, ಈ ಎಲ್ಲ ಘಟನೆಗಳು ಹಠಾತ್ ಸುರಿದ ಮಳೆಯಿಂದ ಸಂಭವಿಸಿವೆ ಎಂದು ಹೊನ್ನಾಂಬ ಎಸ್. ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ