Karnataka Weather: ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ

| Updated By: ganapathi bhat

Updated on: Aug 23, 2021 | 12:48 PM

Karnataka Rain Updates: ಕರ್ನಾಟಕದಲ್ಲಿ ವಿಶೇಷವಾಗಿ ರಾಜಧಾನಿ ಬೆಂಗಳೂರು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Karnataka Weather: ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ
ಮಳೆ (ಸಾಂಕೇತಿಕ ಚಿತ್ರ)
Follow us on

ದೆಹಲಿ: ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಂತೆ, ಮೇ 10ನೇ ತಾರೀಖಿನವರೆಗೆ ಯೆಲ್ಲೋ ಅಲರ್ಟ್ ಇರಲಿದೆ. ಸಣ್ಣ ಅಥವಾ ಮಧ್ಯಮ ಪ್ರಮಾಣದಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಪ್ರಕಟಣೆಯಲ್ಲಿ ಸೂಚನೆ ನೀಡಲಾಗಿದೆ.

ಕರ್ನಾಟಕ ರಾಜ್ಯದ ಪ್ರದೇಶಗಳ ಹೊರತಾಗಿ ಕೇರಳ, ಮಾಹೆ, ಲಕ್ಷದ್ವೀಪಗಳಲ್ಲೂ ಮಳೆಯಾಗುವ ಸಂಭವವಿದೆ. ಕರ್ನಾಟಕದಲ್ಲಿ ವಿಶೇಷವಾಗಿ ರಾಜಧಾನಿ ಬೆಂಗಳೂರು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಸಂಜೆಯ ವೇಳೆಗೆ ಮಳೆಯಾಗುತ್ತಿದೆ. ಗುಡುಗು, ಮಿಂಚು ಸಹಿತ ಗಾಳಿ ಮಳೆ ಸುರಿಯುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆ ಕೂಡ ಸಂಭವಿಸಿದೆ.

ಬೆಂಗಳೂರು ನಗರದಲ್ಲಿ ಇಂದು ಭಾಗಶಃ ಮೋದಕವಿದ ವಾತಾವರಣವಿದೆ. ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್​ವರೆಗೆ ತಾಪಮಾನ ಇರಲಿದೆ. ಮಂಗಳೂರಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಬಹುದು. ಹಾಗೂ ಶಿವಮೊಗ್ಗದಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಬಹುದು. ಗುಡುಗು ಸಹಿತ ತುಂತುರು ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಮಳೆ ಬರಲಿ ಎಂದು ಕಪ್ಪೆಗಳ ಮದುವೆ ಮಾಡಿಸಿದ ಗ್ರಾಮಸ್ಥರು; ವಿಡಿಯೋ ವೈರಲ್

3ನೇ ಅಲೆ ಬರುವುದರೊಳಗೆ ಎಲ್ಲರಿಗೂ ಲಸಿಕೆ, ಹವಾಮಾನದಿಂದ ಆಕ್ಸಿಜನ್ ಉತ್ಪತ್ತಿ ಮಾಡ್ತೀವಿ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್

(Karnataka Rain Expected in Bengaluru Malnad Region Coastal Karnataka till 10 May Yellow Alert for next 3 days)

Published On - 5:56 pm, Fri, 7 May 21