AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ಧಾರಾಕಾರ ಮಳೆ, ರೆಡ್ ಅಲರ್ಟ್​ ಘೋಷಣೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜುಲೈ 29ರವರೆಗೆ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ಧಾರಾಕಾರ ಮಳೆ, ರೆಡ್ ಅಲರ್ಟ್​ ಘೋಷಣೆ
ಮಳೆ
ನಯನಾ ರಾಜೀವ್
|

Updated on: Jul 27, 2023 | 7:29 AM

Share

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜುಲೈ 29ರವರೆಗೆ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕ್ಯಾಸಲ್ ರಾಕ್, ಸುಬ್ರಹ್ಮಣ್ಯ, ಗೇರುಸೊಪ್ಪ, ಉಡುಪಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಹೊನ್ನಾವರ, ಲಿಂಗನಮಕ್ಕಿ, ಕುಮಟಾ, ಮಂಚಿಕೆರೆ, ಮಂಕಿ, ಕೊಲ್ಲೂರು, ಕುಂದಾಪುರ, ಕೋಟ, ಮುಲ್ಕಿ, ಸಿದ್ದಾಪುರ, ಬೇಲಿಕೇರಿ, ತಾಳಗುಪ್ಪ, ಕೊಪ್ಪ, ಜಯಪುರ, ಮಂಗಳೂರು, ಮಾಣಿ, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಶಿರಾಲಿ, ಲೋಂಡಾ, ಉಪ್ಪಿನಂಗಡಿ, ಕಾರ್ಕಳ, ಕೊಟ್ಟಿಗೆಹಾರ, ಶೃಂಗೇರಿ, ಹುಂದಚಕಟ್ಟೆಯಲ್ಲೂ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಹಾ ಮಳೆ

ಪುತ್ತೂರು, ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ, ಯಲ್ಲಾಪುರ, ಸಕಲೇಶಪುರ, ಬಾಳೆಹೊನ್ನೂರು, ತ್ಯಾಗರ್ತಿ, ಭಾಗಮಂಡಲ, ಮಂಡಗದ್ದೆ, ನಾಪೋಕ್ಲು, ಹುಡಕೆರೆ, ವಿರಾಜಪೇಟೆ, ಆನವಟ್ಟಿ, ತರೀಕೆರೆ, ಎನ್​ಆರ್​ಪುರ, ಮಂಡಗದ್ದೆ, ಸೋಮವಾರಪೇಟೆ, ಬಸವನಬಾಗೇವಾಡಿ, ಕಲಘಟಗಿ, ಧಾರವಾಡ, ಶಿವಮೊಗ್ಗ, ಶನಿವಾರಸಂತೆ, ಮೂರ್ನಾಡು, ಹಾನಗಲ್, ಹಾವೇರಿ, ಬಾಗಲಕೋಟೆ, ಕುರ್ಡಿ, ಕಂಪ್ಲಿ, ಹೊಸದುರ್ಗ, ಹೆಬ್ಬೂರು, ಬೇಲೂರು, ಶ್ರವಣಬೆಳಗೊಳ, ನಿಪ್ಪಾಣಿ, ಚಿಕ್ಕೋಡಿ, ಹುಕ್ಕೇರಿ, ಸಂಕೇಶ್ವರ, ಕುಂದಗೋಳ, ರಾಯಭಾಗ, ಲಿಂಗಸುಗೂರು, ದೇವದುರ್ಗ, ಮಾನ್ವಿ, ಅಡಕಿ, ಖಜೂರಿ, ಆಳಂದ, ಬೀದರ್, ಹನುಮಸಾಗರ, ಮುಧೋಳ, ಕಲಬುರಗಿ, ಮಂಠಾಳ, ಬೆಂಗಳೂರು ನಗರ, ಜಿಕೆವಿಕೆ, ಉತ್ತರಹಳ್ಳಿ, ಮಾಗಡಿ, ಚನ್ನಪಟ್ಟಣ, ಪಾವಗಡ, ಅರಕಲಗೂಡು, ಮೈಸೂರು, ನಾಯಕನಹಟ್ಟಿ, ಹೊಸಕೋಟೆ, ಚಾಮರಾಜನಗರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಬೆಳಗ್ಗೆಯಿಂದಲೇ ತಂಪಾದ ಗಾಳಿ ಬೀಸುತ್ತಿದೆ, ಎಚ್​ಎಎಲ್​ನಲ್ಲಿ 25.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 24.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ