Karnataka Rain: ಬೆಂಗಳೂರು, ರಾಮನಗರ ಸೇರಿ 17 ಜಿಲ್ಲೆಗಳಲ್ಲಿ ಮಳೆಯ ಆರ್ಭಟ; ಇಂದು ಹಳದಿ ಅಲರ್ಟ್ ಘೋಷಣೆ
Bengaluru Rain: ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.
ಬೆಂಗಳೂರು: ಭಾರೀ ಮಳೆಯಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹದ (Karnataka Flood) ಭೀತಿ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಮುಂದಿನ 3 ದಿನಗಳಲ್ಲಿ ಕರ್ನಾಟಕದಲ್ಲಿ ನಿರಂತರ ಮಳೆಯಾಗಲಿದ್ದು, ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ನೀಡಲಾಗಿದೆ.
ರಾಮನಗರದಲ್ಲಿ ಬಿಡದೇ ಸುರಿಯುತ್ತಿರುವ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಳೆನೀರು ನದಿಯಂತೆ ಹರಿಯುತ್ತಿದೆ. ಇದರಿಂದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ರಾಜ್ಯಾದ್ಯಂತ ಮುಂದಿನ 3 ದಿನಗಳ ಕಾಲ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಹೆದ್ದಾರಿಗಳು ಜಲಾವೃತಗೊಂಡಿರುವುದರಿಂದ ರಾಜ್ಯದ ಶಾಲಾ-ಕಾಲೇಜುಗಳಿಗೆ ನಿನ್ನೆ ರಜೆ ಘೋಷಿಸಲಾಗಿತ್ತು.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮೈಸೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಿಂದ ಐವರು ಸಾವನ್ನಪ್ಪಿದ್ದಾರೆ. ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ ಸೇರಿದಂತೆ ಬಹುತೇಕ ಎಲ್ಲ ಕಡೆಗಳಲ್ಲಿ ಮುಂದಿನ 3 ದಿನ ಜೋರಾಗಿ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಿಗೆ ಸೆ.2ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Bengaluru Weather: ಬೆಂಗಳೂರಿನಲ್ಲಿ ಮುಂದಿನ 3 ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ: ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ
ಇಂದು ಕೂಡ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಇಂದು 40-50 ಕಿ.ಮೀ ವೇಗದಲ್ಲಿರುವ ಗಾಳಿ, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
#BREAKING: Karnataka CM Basavaraj Bommai to visit rain affected areas of Ramanagar and Channapattana this afternoon at 2pm.
CM Bommai to hold meeting with officials on the preparedness and the rain situation. pic.twitter.com/Xt2y5HuTad
— Suraj Suresh (@Suraj_Suresh16) August 29, 2022
ಕರ್ನಾಟಕದಲ್ಲಿ ಇಂದು ಕೂಡ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನದಲ್ಲಿ ಉಂಟಾದ ವೈಪರೀತ್ಯಗಳಿಂದ ಕರ್ನಾಟಕದ ಎಲ್ಲ ಭಾಗಗಳಲ್ಲಿ ಸೆಪ್ಟೆಂಬರ್ 2ರವರೆಗೆ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ರೂ. ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳ ಹಲವೆಡೆ ಇನ್ನೂ 3 ದಿನ ಮಳೆ ಅಬ್ಬರಿಸಲಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆ ಎರಡು-ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ ಮುಂದಿನ ಮೂರ್ನಾಲ್ಕು ದಿನ ಮಳೆ ಅಬ್ಬರಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ಅರಬ್ಬಿ ಸಮುದ್ರದ ಕೇರಳ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಿರುವುದರಿಂದ ರಾಜ್ಯದ ಒಳನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ.
@ndtvindia @ravishndtv @TOIBengaluru @khanumarfa Situation in Ramnagar,karnataka just 40km from Bangalore..due to rain. pic.twitter.com/LP3jsAFSnA
— Niz (@nizammd23) August 29, 2022
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಕರ್ನಾಟಕ ಮಾತ್ರವಲ್ಲದೆ ಗೋವಾ, ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ಪಶ್ಚಿಮ ಬಂಗಾಳ ಮತ್ತು ಅರುಣಾಚಲ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಹರಿಯಾಣ, ರಾಜಸ್ಥಾನ, ಗುಜರಾತ್, ಒಡಿಶಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.