AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: ರವಿವಾರ ರಾಜ್ಯಾದ್ಯಂತ ಸಾಧಾರಣ ಮಳೆ

ಕರ್ನಾಟಕದಲ್ಲಿ ಮುಂದಿನ ಏಳು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ರಾಜ್ಯದ ಹಲವು ಭಾಗಗಳಲ್ಲಿ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಆಗಸ್ಟ್ 14 ರಿಂದ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆಯ ಹವಾಮಾನ: ರವಿವಾರ ರಾಜ್ಯಾದ್ಯಂತ ಸಾಧಾರಣ ಮಳೆ
ಮಳೆ (ಸಾಂದರ್ಭಿಕ ಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Aug 09, 2025 | 5:55 PM

Share

ಬೆಂಗಳೂರು, ಆಗಸ್ಟ್​ 09: ಕರ್ನಾಟಕದಲ್ಲಿ ಮಳೆ (Karnataka Rain) ಮುಂದುವರೆದಿದೆ. ಮುಂದಿನ 7 ದಿನಗಳವರೆಗೆ ರಾಜ್ಯಾದ್ಯಂತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ (KSNDMC) ನೀಡಿದೆ. ಆಗಸ್ಟ್ 14 ರಿಂದ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ರವಿವಾರ (ಆ.09) ಸಾಧಾರಣ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ರವಿವಾರ ಸಾಧಾರಣ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಾಳೆ (ಆ.10) ರಂದು ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಸಿದೆ.

ಗಾಳಿಯ ವೇಗ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್​ 10 ರಂದು ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್​ 10 ಗಾಳಿಯ ವೇಗವು ಪ್ರತಿ ಗಂಟೆಗೆ 30-40 ಕಿಮೀ ಇರಲಿದೆ. ಇನ್ನು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗಾಳಿಯ ವೇಗವು ಆಗಸ್ಟ್​ 10ರಂದು ಗಂಟೆಗೆ 40-50 ಕಿಮೀ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್​ 09 ರಿಂದ ಆಗಸ್ಟ್​ 13ರ ವರೆಗೂ ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣ ಇರಲಿದೆ. ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿಯಷ್ಟು ಇರುವ ಸಾಧ್ಯತೆ ಇದೆ. ಗಾಳಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

ಬೆಂಗಳೂರು ಗ್ರಾಮಾಂತರದಲ್ಲಿ ಆಗಸ್ಟ್​ 10 ರಂದು ಮೋಡಕವಿದ ವಾತಾವರಣ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್​ನಷ್ಟು ದಾಖಲಾಗಲಿದೆ. ಗಾಳಿಯ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:55 pm, Sat, 9 August 25

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು