ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಮುಂಡರಗಿ, ಕೆಂಭಾವಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೆಕೆ ವಿಪರೀತವಾಗಿದೆ. ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮುಂಗಾರು ದುರ್ಬಲವಾಗಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಗಸ್ಟ್ 17ರಿಂದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಆಗಸ್ಟ್ 20ರಿಂದ ಮುಂಗಾರು ಚುರುಕು, ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಪಂಜಾಬ್, ದೆಹಲಿ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮುಂಗಾರು ಕೊರತೆ ಎದುರಾಗಿದೆ, ಸ್ಕೈಮೆಟ್ ವರದಿ ಪ್ರಕಾರ, ಅರುಣಾಚಲ ಪ್ರದೇಶ, ಪೂರ್ವ ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಮೇಘಾಲಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ