AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಹಾಸನ ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಕಳೆದ ಒಂದು ವಾರದಿಂದ ಹಾಸನ ಜಿಲ್ಲೆಯ ಬಯಲು ಸೀಮೆಯಲ್ಲಿ ವರುಣಾರ್ಭಟ ನಡೆಯುತ್ತಿದ್ದು, ಮಲೆನಾಡು ಭಾಗದಲ್ಲಿಯೂ ಮಳೆಯ ಆರ್ಭಟ ಆರಂಭಗೊಂಡಿದೆ. ಈ ನಿಟ್ಟಿನಲ್ಲಿ ಸಕಲೇಶಪುರ ತಾಲೂಕಿನ ಅಂಗನವಾಡಿ, ಶಾಲಾ ಮಕ್ಕಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶಿಸಿದ್ದಾರೆ.

Karnataka Rains: ಹಾಸನ ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 06, 2022 | 6:38 AM

Share

ಹಾಸನ: ರಾಜ್ಯದಲ್ಲಿ ಮಳೆಯ ಆರ್ಭಟ ಇಂದು ಕೂಡ ಮುಂದುವರಿಯಲಿದ್ದು, ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮಕ್ಕಳ ಹಿತದೃಷ್ಟಿಯಿಂದ ಕೊಡಗು ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಇದೀಗ ಹಾಸನ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ ತಾಲೂಕಿನ ಅಂಗನವಾಡಿ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಎಚ್.ಬಿ.ಜೈಕುಮಾರ್​​ ಅವರು ಆದೇಶ ಹೊರಡಿಸಿದ್ದಾರೆ.

ಕಳೆದ ಒಂದು ವಾರದಿಂದ ಹಾಸನ ಜಿಲ್ಲೆಯ ಬಯಲು ಸೀಮೆಯಲ್ಲಿ ವರುಣಾರ್ಭಟ ನಡೆಯುತ್ತಿದ್ದು, ಮಲೆನಾಡು ಭಾಗದಲ್ಲಿಯೂ ಮಳೆಯ ಆರ್ಭಟ ಆರಂಭಗೊಂಡಿದೆ. ಈ ಮುನ್ಸೂಚನೆ ಹಿನ್ನೆಲೆ ಹಾಸನ ಜಿಲ್ಲೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ಸೂಚನೆ ಹಿನ್ನೆಲೆ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಸಕಲೇಶಪುರ ತಹಸೀಲ್ದಾರ್ ಎಚ್.ಬಿ.ಜೈಕುಮಾರ್ ಅವರು ತಾಲ್ಲೂಕಿನ ಅಂಗನವಾಡಿ ಹಾಗೂ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಇಂದು ಮಳೆಯ ಹಿನ್ನೆಲೆಯಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದು ಕೊಡಗಿನಾದ್ಯಂತ ಮಳೆಯಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಮುಂದಿನ 4 ದಿನಗಳವರೆಗೂ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್, ಆ. 7 ಮತ್ತು 8ರಂದು ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.

Published On - 6:38 am, Sat, 6 August 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್