Karnataka Rains: ಜುಲೈ 24ರವರೆಗೆ ಕರ್ನಾಟಕದ ಈ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ

ಕರ್ನಾಟಕದಲ್ಲಿ ಮಹಾಮಳೆ ಮುಂದುವರೆದಿದೆ, ಜುಲೈ 24ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಗುಡ್ಡ ಕುಸಿದಿದೆ, ನದಿಗಳಲ್ಲಿ ನೀರು ತುಂಬಿವೆ, ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.

Karnataka Rains: ಜುಲೈ 24ರವರೆಗೆ ಕರ್ನಾಟಕದ ಈ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ
ಮಳೆImage Credit source: Business Standard
Follow us
|

Updated on: Jul 19, 2024 | 7:52 AM

ಕರ್ನಾಟಕದಲ್ಲಿ ಮಹಾಮಳೆ ಮುಂದುವರೆದಿದೆ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಎಲ್ಲೆಡೆ ಅತಿ ಹೆಚ್ಚಿನ ಮಳೆಯಾಗಿದೆ. ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಮತ್ತಷ್ಟು ಮಳೆ ಹೆಚ್ಚಲಿದೆ.

ಕೊಲ್ಲೂರು, ಕೊಟ್ಟಿಗೆಹಾರ, ಜೋಯಿಡಾ, ಸಿದ್ದಾಪುರ, ಹುಂಚದಕಟ್ಟೆ, ಕದ್ರಾ, ಕುಮಟಾ, ಆಗುಂಬೆ, ಭಾಗಮಂಡಲ, ಬೆಳ್ತಂಗಡಿ, ಗೇರುಸೊಪ್ಪ, ಲೋಂಡಾ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ. ಮಾಣಿ, ಶಿರಾಲಿ, ಧರ್ಮಸ್ಥಳ, ಮಂಕಿ, ಕಳಸ, ಪಣಂಬೂರು, ಹೊನ್ನಾವರ, ಗೋಕರ್ಣ, ಮಂಗಳೂರು ವಿಮಾನ ನಿಲ್ದಾಣ, ಪುತ್ತೂರು, ಉಪ್ಪಿನಂಗಡಿ, ಯಲ್ಲಾಪುರ, ಕಾರ್ಕಳ, ಹಳಿಯಾಳ, ಸುಳ್ಯ, ಕಾರವಾರ, ಕಮ್ಮರಡಿ, ಕೊಪ್ಪ, ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಕೂಡ ಭಾರಿ ಮಳೆ ಸುರಿದಿದೆ.

ಬನವಾಸಿ, ಉಡುಪಿ, ಕುಂದಾಪುರ, ತ್ಯಾಗರ್ತಿ, ಸೋಮವಾರಪೇಟೆ, ಹಾಸನ, ನಾಪೊಕ್ಲು, ಎನ್​ಆರ್​ಪುರ, ಕಿರವತ್ತಿ, ಕೋಟ, ಜಯಪುರ, ಶೃಂಗೇರಿ, ಬಂಡೀಪುರ, ಮುಂಡಗೋಡು, ಹಿರೇಕೆರೂರು, ಭದ್ರಾವತಿ, ಶಿವಮೊಗ್ಗ, ಬೆಳಗಾವಿ, ಆನವಟ್ಟಿ, ಸಂಕೇಶ್ವರ, ಸವಣೂರು, ಚಿಕ್ಕೋಡಿ, ಕುಶಾಲನಗರ, ಶ್ರವಣಬೆಳಗೊಳ, ಗೌರಿಬಿದನೂರು, ಬೈಲಹೊಂಗಲ, ಬಾದಾಮಿ, ಹುಕ್ಕೇರಿ, ಇಳಕಲ್, ರಾಯಭಾಗ್, ಹಾರಂಗಿ, ಕೃಷ್ಣರಾಜಪೇಟೆ, ಚನ್ನಗಿರಿ, ಹರಪನಹಳ್ಳಿ, ಕೃಷ್ಣರಾಜಸಾಗರ, ದಾವಣಗೆರೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ರೆಡ್​ ಅಲರ್ಟ್​, ಜುಲೈ 19ರವರೆಗೂ ಮಳೆ

ಬೆಂಗಳೂರಿನಲ್ಲಿ ಕೂಡ ಮಳೆಯಾಗುತ್ತಿದೆ, ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊನ್ನಾವರದಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ