Karnataka Rain: ಸುರಿಯುತ್ತಿರುವ ಭಾರೀ ಮಳೆ; ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ದಕ್ಷಿಣ ಕನ್ನಡದ ಸುಳ್ಯ ಮತ್ತು ಕಡಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಂಗನವಾಡಿ ಕೇಂದ್ರ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Karnataka Rain: ಸುರಿಯುತ್ತಿರುವ ಭಾರೀ ಮಳೆ; ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Aug 02, 2022 | 10:09 AM

ಬೆಂಗಳೂರು: ರಾಜ್ಯಾದ್ಯಂತ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು, ಹಲವೆಡೆ ನಿರಂತರ ಮಳೆಯಾಗುತ್ತಿದೆ. ಕರವಾಳಿ ಭಾಗವಾಗಿರುವ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರುವ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸುಳ್ಯ, ಕಡಬ ತಾಲೂಕಿನಲ್ಲಿ ವರುಣಾರ್ಭಟ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೊರಡಿಸಿದ್ದು, ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಟ್ಕಳದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತಾಲೂಕಿನ ಶಾಲಾ ಕಾಲೇಜಿಗೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ರಜೆ ಘೋಷಣೆ ಮಾಡಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲೂ ರಜೆ ಘೋಷಣೆ

ಕೊಪ್ಪಳ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಎಲ್ಲ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಿಗ್ಗೆಯಿಂದಲೇ ನಿರಂತರವಾಗಿ ಮಳೆ ಸುರಿಯಲು ಆರಂಭವಾದ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಸುಂದರೇಶಬಾಬು ಅವರು ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ಇಂದಿನಿಂದ 4 ದಿನಗಳ ಕಾಲ ಅಂದರೆ ಆಗಸ್ಟ್ 4ರವರೆಗೆ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಲ್ಲದೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಆಗಸ್ಟ್ 3ಕ್ಕೆ ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3 ಮತ್ತು 4ರಂದು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಆಗಸ್ಟ್ 4ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆಗಸ್ಟ್ 3, 4ರಂದು ಮಳೆಯಾಗಲಿದೆ. ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4ರಂದು ಭಾರೀ ಮಳೆ ಬೀಳುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಬಳ್ಳಾರಿ, ಮಂಡ್ಯ, ರಾಮನಗರದಲ್ಲಿ ಇಂದಿನಿಂದ ಆಗಸ್ಟ್ 4ರವರೆಗೆ ಹಾಗೂ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆಗಸ್ಟ್ 4ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

Published On - 7:54 am, Tue, 2 August 22

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ