Karnataka Rains: ಬೆಂಗಳೂರಿನಲ್ಲಿ ಜೂನ್ 4 ರವರೆಗೂ ಭಾರಿ ಮಳೆ, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹರಪನಹಳ್ಳಿ, ಕುಷ್ಟಗಿ, ಹಗರಿಬೊಮ್ಮನಹಳ್ಳಿ, ಯಲಬುರ್ಗಾ, ಹಿರೆಕೆರೂರು, ಹಡಗಲಿ, ತ್ಯಾಗರ್ತಿ, ಶಿಗ್ಗಾಂವಿ, ಕೋಣಂದೂರು, ಶಿವಮೊಗ್ಗ, ಆನವಟ್ಟಿ, ವಿರಾಜಪೇಟೆ, ಪೊನ್ನಂಪೇಟೆ, ಮುರ್ನಾಡು, ಕೊಟ್ಟಿಗೆಹಾರ, ಜಯಪುರ, ಧರ್ಮಸ್ಥಳ, ಬನವಾಸಿ, ಬೇವೂರು, ಮುನಿರಾಬಾದ್, ಕವಡಿಮಟ್ಟಿ, ಹುಂಚದಕಟ್ಟೆ, ಹೊನ್ನಾಳಿ, ಗೋಣಿಕೊಪ್ಪಲು, ರಾಯಲ್ಪಾಡು, ಕಿರವತ್ತಿ, ಯಡ್ರಾಮಿ, ಕಲಘಟಗಿ, ದಾವಣಗೆರೆ, ಅಜ್ಜಂಪುರ, ಹೊಸಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ನಾಯಕನಹಟ್ಟಿ, ಗೋಪಾಲ್ನಗರ, ಬೇಲೂರಿನಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ಮತ್ತಷ್ಟು ಓದಿ: Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತದಲ್ಲಿ ಟ್ರಾಫಿಕ್ ಜಾಮ್
ಎಚ್ಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಬೆಂಗಳೂರು ನಗರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠಢ ಉಷ್ಣಾಂ ದಾಖಲಾಗಿದೆ.