Karnataka Rains: ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

|

Updated on: Jun 01, 2023 | 7:25 AM

ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
Image Credit source: Deccan Herald
Follow us on

ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ವಿಜಯನಗರ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾಗಡಿ, ವಿರಾಜಪೇಟೆ, ಚಿಂತಾಮಣಿ, ದೇವನಹಳ್ಳಿ, ಶಿಡ್ಲಘಟ್ಟ, ಚಂದೂರಾಯನಹಳ್ಳಿ, ಬೆಂಗಳೂರು ಎಚ್​ಎಎಲ್​, ಗೋಪಾಲ್​ನಗರ, ಮಧುಗಿರಿ, ಗೋಣಿಕೊಪ್ಪಲ್, ಹರದನಹಳ್ಳಿ, ತೊಂಡೆಭಾವಿ, ಬೈಲಹೊಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ, ಕುಣಿಗಲ್, ಚಾಮರಾಜನಗರ, ಹೆಸರಘಟ್ಟ, ಬುಕ್ಕಾಪಟ್ಟಣ, ಮಲವಳ್ಳಿ, ಶ್ರವಣಬೆಳಗೊಳ, ಹಾರಂಗಿ, ಗೌರಿಬಿದನೂರಿನಲ್ಲಿ ಮಳೆಯಾಗಲಿದೆ.

ಮತ್ತಷ್ಟು ಓದಿ: Monsoon 2023: ಕೊಡಗಿನಲ್ಲಿ ಮತ್ತೆ ಮಳೆ ಆತಂಕ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜನರಿಗೆ ಸೂಚನೆ

ಕಲಬುರಗಿಯಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಬಿರುಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ